ಬೆಂಗಳೂರು:ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ.
ಸುಜಾತ ಅವರನ್ನು ಪಕ್ಷದಿಂದ ಅಮಾನತು ಮಾಡಿ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
‘ಕಳೆದ ಕೆಲ ತಿಂಗಳಿಂದ ಪಕ್ಷದ ತೀರ್ಮಾನಗಳನ್ನು ಪದೇಪದೆ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಂಡಗಿಕೊಂಡು ಪಕ್ಷದ ಘನತೆಗೆ ಕುದುಂಟು ಮಾಡಿದ್ದೀರಿ. ಅಲ್ಲದೆ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಈ ಬಗ್ಗೆ ಹಲವು ಬಾರಿ ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ತಿಳಿಸಿದರೂ ಇದುವರೆಗೆ ನೀಡಿಲ್ಲ. ಆದ್ದರಿಂದ ತತ್ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ನಿಮ್ಮನ್ನು ಅಮಾನತು ಮಾಡಲಾಗಿದೆ ‘ ಎಂದು ನಳೀನ್​ ಕುಮಾರ್​ ಕಟೀಲ್​ ಅವರು ಆದೇಶದಲ್ಲಿ ವಿವರಿಸಿದ್ದಾರೆ.
ಒಳ ಒಪ್ಪಂದದಂತೆ ಅಧ್ಯಕ್ಷ ಪದವಿಗೆ ಸುಜಾತ ಕೃಷ್ಣಪ್ಪ ರಾಜೀನಾಮೆ ನೀಡಿರಲಿಲ್ಲ. ಬುಧವಾರ ಸ್ವಪಕ್ಷೀಯ ಸದಸ್ಯರೇ ಜಿಲ್ಲಾ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಸುಜಾತ ಕೃಷ್ಣಪ್ಪರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸಚಿವ ಸ್ಥಾನಕ್ಕೆ ಖುಷಿಯಿಂದಲೇ ರಾಜೀನಾಮೆ ಕೊಡುವೆ ಎಂದ ಆನಂದ್​ಸಿಂಗ್​!

ರಾತ್ರೋರಾತ್ರಿ ಮನೆಯಲ್ಲೇ ಪತ್ನಿಯನ್ನು ಕೊಚ್ಚಿ ಹಾಕಿದ ಭೂಪ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 3 =
Remember me
