ಚಿಕ್ಕಮಗಳೂರು:ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯ ಮೂರು ಕೊಠಡಿಗಳಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥರಲ್ಲಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ. ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × two =
Remember me
