ಚಿಕ್ಕೋಡಿ:ರಾಜ್ಯದಲ್ಲಿ ಈ ಹಿಂದೆ ಭಾರೀ ಸದ್ದು ಮಾಡಿದ್ದ ಕಮಿಷನ್​ ಕಿರುಕುಳ ಪ್ರಕರಣ ಇದೀಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಗ್ರಾಮ ಪಂಚಾಯಿತಿ ಸದಸ್ಯೆ ಒಬ್ಬರು ಕಮಿಷನ್ ಕಿರುಕುಳಕ್ಕೆ ಬೇಸತ್ತು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಪಂಚಾಯಿತಿ ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಎಂಬುವರು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರ ಕ್ಷೇತ್ರದಲ್ಲಿ ಈ ಕಮಿಷನ್ ಕಿರುಕುಳ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಸಹೋದರ-ಸಹೋದರಿ ನಡುವಿನ ಲೈಂಗಿಕತೆ ಬಗ್ಗೆ ಪ್ರಶ್ನೆ: ಪಾಕ್​ ಯೂನಿವರ್ಸಿಟಿ ವಿರುದ್ಧ ಭುಗಿಲೆದ್ದ ಆಕ್ರೋಶ
ಗ್ರಾಮದ ಅಭಿವೃದ್ಧಿ ಕೆಲಸಗಳಿಗಾಗಿ ಕಾಮಗಾರಿ ಅನುಮೋದನೆಗೆ ಪಂಚಾಯಿತಿ ಅಧಿಕಾರಿಗಳಿಂದ ಶೇ. 30 ಕಮಿಷನ್ ಬೇಡಿಕೆ ಇದೆ. ಆದರೆ, ಕಮಿಷನ್ ನೀಡಲು ನನ್ನ ಕೈಯಿಂದ ಸಾಧ್ಯವಾಗದೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪಂಚಾಯತಿಯ 14 ಮತ್ತು 15ನೇ ಹಣಕಾಸು, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆಗೆ ಕಮಿಷನ್ ಬೇಡಿಕೆ ಇಡುತ್ತಿದ್ದಾರೆ. ಕ್ರಿಯಾಯೋಜನೆ ಅನುಮೋದನೆಗಾಗಿಯು ಮುಂಗಡವಾಗಿ ಶೇ. 3 ರಷ್ಟು ಹಣವನ್ನು ನೀಡಬೇಕಿದೆ. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮುಗಂಡ ಹಣ ನೀಡಲು ಪಿಡಿಓ ಮಂಜುನಾಥ್ ದಳವಾಯಿ ಅವರು ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ತ್ರಿಮೂರ್ತಿ ಸಂಚಲನ: ಮೋದಿ ಮ್ಯಾಜಿಕ್, ಷಾ ಕಾರ್ಯತಂತ್ರ, ನಡ್ಡಾ ಸಂಘಟನಾತ್ಮಕ ಗಮನ
ಕಾಮಗಾರಿ ಬಳಿಕ‌ ಹಣದ ಬಿಲ್​​ಗಾಗಿ ಪಿಡಿಒಗೆ 10% ಇಂಜಿನೀಯರ್​ಗೆ 10% ತಾ.ಪಂ ಎಡಿ, ಎಒಗೆ 7% ಹಾಗೂ ಟೆಕ್ನಿಕಲ್​ಗೆ 3% ಸೇರಿ ಒಟ್ಟು 30% ಕಮಿಷನ್ ಬೇಡಿಕೆ ಇಡುತ್ತಿದ್ದಾರೆ. ಇಷ್ಟು ಕಮಿಷನ್​ ಕೊಡಲು ಸಾಧ್ಯವಿಲ್ಲ. ಅಲ್ಲದೆ, ಇಷ್ಟೊಂದು ಕಮಿಷನ್​ ನೀಡಿ ಉತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ನಡೆಸುವುದು ಕಠಿಣವಾಗಿದೆ. ಹೀಗಾಗಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಸಿದ್ದಪ್ಪ ರಾಜಂಗಳೆ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಇಂದು BJP ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್

ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ರಜೆ ನಿರಾಕರಣೆ: ರಾಜೀನಾಮೆಗೆ ಮುಂದಾದ ಎಸ್​ಐ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 5 =
Remember me
