ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕೆಲಸಕ್ಕೆ ಬರುವವರಲ್ಲಿ ಮಹಿಳೆಯರೇ ಹೆಚ್ಚು. ಹಾಗೆಯೇ ಪುಟ್ಟ ಮಕ್ಕಳು ಲಾಲನೆ, ಪಾಲನೆಯಲ್ಲಿ ಸಿಂಹಪಾಲು ಜವಾಬ್ದಾರಿಯೂ ಅವರದೇ. ಮೂರು ವರ್ಷದೊಳಗಿನ ಮಕ್ಕಳನ್ನು ಮಡಿಲಲ್ಲಿ ಕಟ್ಟಿಕೊಂಡು ಕೂಲಿ ಮಾಡಲು ಬರುವ ಗ್ರಾಮೀಣ ಮಹಿಳೆಯರಿಗೆ ‘ಕೂಸಿನ ಮನೆ’ಗಳು ನೆರವಿಗೆ ಬರಲಿವೆ.
ರಾಜ್ಯದ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಈ ಕೇಂದ್ರಗಳು ದಿನದ ಆರು ತಾಸು‌ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಗ್ರಾಮ ಪಂಚಾಯಿತಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರು ಕೆಲಸ ಮಾಡುವ ಸಮಯವನ್ನು ನಿರ್ಧರಿಸಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಾಲ್ಕು ಸಾವಿರ ಶಿಶು ಪಾಲನಾ ಕೇಂದ್ರಗಳ ಪೈಕಿ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರುವ 10 ಮಕ್ಕಳ ಆರೈಕೆದಾರ ( ಕೇರ್ ಟೇಕರ್ಸ್ ) ರನ್ನು ಆಯ್ಕೆ ಮಾಡಿ ಅವರಿಗೆ ಮೊಬೈಲ್ ಕ್ರೆಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುವುದು. ಇದರಿಂದ 40 ಸಾವಿರ ಕ್ರಿಯಾಶೀಲ ನರೇಗಾ ಜಾಬ್ ಕಾರ್ಡ್ ಹೊಂದಿರುವ ಮಹಿಳೆಯರು ಮಕ್ಕಳ ಆರೈಕೆದಾರರಾಗಿ ಕೆಲಸ ಮಾಡಲು ಅವಕಾಶ ಲಭಿಸಲಿದೆ ಎಂದು ಹೇಳಿದ್ದಾರೆ.
‘ ಕೂಸಿನ ಮನೆ ‘ ಶಿಶುಪಾಲನಾ ಕೇಂದ್ರದಲ್ಲಿ ನರೇಗಾ ಕ್ರಿಯಾಶೀಲ ಉದ್ಯೋಗ ಚೀಟಿಯುಳ್ಳ ಕುಟುಂಬದ ಮೂರು ವರ್ಷದ ಮಕ್ಕಳನ್ನು ಆರೈಕೆಗೆ ಬಿಡಬಹುದಾಗಿದ್ದು, ಪ್ರತಿ ಕೇಂದ್ರದಲ್ಲಿ ಗರಿಷ್ಠ 25 ಮಕ್ಕಳನ್ನು ದಾಖಲಿಸಲು ಅವಕಾಶವಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಆಯಾ ಗ್ರಾ.ಪಂ.ಗಳು ತಮ್ಮ ವ್ಯಾಪ್ತಿಯಲ್ಲಿ ‘ ಕೂಸಿನ ಮನೆ’ ಪ್ರಾರಂಭಿಸಲಿವೆ. ಒಟ್ಟು ನಾಲ್ಕು ಸಾವಿರ‌ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲು ಸರ್ಕಾರ 40 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಈ ಕೇಂದ್ರಗಳಿಗೆ ಬೇಕಾದ ಕಟ್ಟಡ ಹಾಗೂ ಇತರ ಮೂಲ ಸವಲತ್ತುಗಳನ್ನು ಕಲ್ಪಿಸಲು ಬೇಕಾದ ಅನುದಾನ ಒದಗಿಸಲು ಗ್ರಾ.ಪಂ.ಗಳಿಗೆ ತಿಳಿಸಲಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ‌ 2023-24ನೇ ಸಾಲಿನ ಬಜೆಟ್ ನಲ್ಲಿ ನರೇಗಾ ಕೂಲಿ ಕೆಲಸದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದನ್ನು ಗುರುತಿಸಿದ್ದರು‌. ಇಂತಹ ಮಹಿಳೆಯರ ಮೂರು ವರ್ಷದ ಮಕ್ಕಳನ್ನು ನೋಡಿಕೊಳ್ಳಲು ನಾಲ್ಕು ಸಾವಿರ ‘ಕೂಸಿನ ಮನೆ’ ತೆರೆಯಲಾಗುವುದು. ಮಹಿಳೆಯರ ನರೇಗಾ ಕೂಲಿ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಘೋಷಿಸಿದ್ದನ್ನು ಪ್ರಿಯಾಂಕ್ ಖರ್ಗೆ ಉಲ್ಲೇಖಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − eight =
Remember me
