ಬಳ್ಳಾರಿ:ಹುಚ್ಚುನಾಯಿಯೊಂದು ಕಚ್ಚಿದ್ದರಿಂದಾಗಿ ನಾಲ್ಕು ವರ್ಷದ ಮಗು ಸಾವಿಗೀಡಾದ ಪ್ರಕರಣ ನಡೆದಿದೆ. ಅದರಲ್ಲೂ ಎರಡು ತಿಂಗಳಲ್ಲಿ ಇದು ಎರಡನೇ ಪ್ರಕರಣವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.
ಬಳ್ಳಾರಿ ನಗರದ 31ನೇ ವಾರ್ಡ್ ನಿವಾಸಿ ಕಿಶಾರ್ ಎನ್ನುವವರ ನಾಲ್ಕು ವರ್ಷದ ಪುತ್ರಿ ತಯಿಬಾ ಸಾವಿಗೀಡಾದ ಮಗು. ಇದರೊಂದಿಗೆ ಕಳೆದ ಎರಡು ತಿಂಗಳಲ್ಲಿ ಒಟ್ಟು ಮೂವರು ಮಕ್ಕಳು ಹುಚ್ಚುನಾಯಿ ಕಡಿತಕ್ಕೆ ಬಲಿ ಆದಂತಾಗಿದೆ. ಎರಡು ತಿಂಗಳ‌ ಹಿಂದಷ್ಟೇ ಬಾದನಹಟ್ಟಿ ಗ್ರಾಮದ ಎರಡು ಮಕ್ಕಳು ಹುಚ್ಚುನಾಯಿ ಕಡಿತದಿಂದಾಗಿ ಸಾವಿಗೀಡಾಗಿದ್ದರು.
ಇದನ್ನೂ ಓದಿ:ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ
ಫೆಬ್ರವರಿ 7ರಂದು ವಟ್ಟಪ್ಪಗೆರೆ ಪ್ರದೇಶದಲ್ಲಿ 30 ಜನರ ಮೇಲೆ ಹುಚ್ಚುನಾಯಿ ದಾಳಿ ಮಾಡಿದ್ದು, ಅಂದು ತಯಿಬಾ ಕೂಡ ಕಡಿತಕ್ಕೆ ಒಳಗಾಗಿದ್ದಳು. ಆಕೆಗೆ ಬಳ್ಳಾರಿಯ ವಿಮ್ಸ್​ನಲ್ಲಿ ಚಿಕಿತ್ಸೆ ನೀಡಿ, ಬಳಿಕ ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವಿಗೀಡಾಗಿದ್ದು, ಇಂದು ಸಂಜೆ ಬಳ್ಳಾರಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ಬಳ್ಳಾರಿಯಲ್ಲಿ ಪದೇಪದೆ ಹುಚ್ಚು ನಾಯಿ ದಾಳಿ ಆಗುತ್ತಿದ್ದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಒಂದೇ ಮನೆಯ ನಾಲ್ವರ ಹತ್ಯೆ; ನಾಲ್ಕು ಕೊಲೆಗಳ ಆರೋಪಿಯ ತಾಯಿ ಹೇಳಿದ್ದೇನು?
ಬೇರೆ ಏನನ್ನಾದರೂ ಬರೆದಿರುವ ನೋಟುಗಳನ್ನು ಸ್ವೀಕರಿಸುವಂತಿಲ್ಲವೇ?: ಇಲ್ಲಿದೆ ಸತ್ಯಾಂಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 13 =
Remember me
