ತುಮಕೂರು:ಭೀಕರ ಅಪಘಾತವೊಂದರಲ್ಲಿ ಮೂರು ವರ್ಷದ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ನಿನ್ನೆಯಷ್ಟೇ ನಾಲ್ಕು ಅಪಘಾತಗಳಲ್ಲಿ ನಾಲ್ವರು ಬಲಿಯಾಗಿದ್ದ ತುಮಕೂರು ಜಿಲ್ಲೆಯಲ್ಲೇ ಇಂದು ಈ ಅಪಘಾತ ಸಂಭವಿಸಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗವಿಮಠ ಬಳಿ ಲಾರಿ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಆಟೋದಲ್ಲಿದ್ದ ಮೂರು ವರ್ಷದ ಮಗು, ಬೆಂಗಳೂರಿನ ಹೆಗ್ಗೆರೆ ಮೂಲದ ತನ್ವಿಕಾ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಬೆಂಗಳೂರು ಮೂಲದ ಶಿವರಾಜು ಕುಟುಂಬ ಕುಣಿಗಲ್ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಈ ಪ್ರದೇಶದಲ್ಲಿ ಪದೇಪದೆ ಅಪಘಾತ; 3 ದಿನಗಳಲ್ಲಿ ನಾಲ್ಕೈದು ಆ್ಯಕ್ಸಿಡೆಂಟ್: ಇಂದು ಮತ್ತೊಂದು ಸಾವು
ಮದ್ದೂರು ಕಡೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿಯು ಆಟೋರಿಕ್ಷಾಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ತನ್ವಿಕಾ ಸ್ಥಳದಲ್ಲೇ ಸಾವಿಗೀಡಾದರೆ, ಐಶ್ವರ್ಯ, ಸರಸ್ವತಿ, ಮುನಿಯಮ್ಮ, ಶಿವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಈ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ನಾಲ್ಕು ಅಪಘಾತ; ಒಟ್ಟು ನಾಲ್ವರ ಸಾವು
ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..
ಗ್ರಾಹಕರಿಬ್ಬರ ಖಾತೆಯಿಂದಲೇ ಕೋಟಿಗಟ್ಟಲೆ ಹಣ ತನ್ನ ಖಾತೆಗೆ ವರ್ಗಾಯಿಸಿಕೊಂಡ ಬ್ಯಾಂಕ್ ಅಧಿಕಾರಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
