ಅವಿನಾಶ ಮೂಡಂಬಿಕಾನ ಬೆಂಗಳೂರು
ಬಾಲ್ಯದಲ್ಲಿ ತುಂಟಾಟವಾಡುತ್ತಾ ಬೆಳೆಯಬೇಕಾದ ಮಕ್ಕಳು ನಿಷ್ಕರುಣೆಯಿಂದ ಕೂಡಿದ ದುಷ್ಟರ ಕಪಿಮುಷ್ಠಿಗೆ ಸಿಲುಕಿ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆ. ಇದು ಬಾಲ್ಯದೊಟ್ಟಿಗೆ ಮಕ್ಕಳ ಬದುಕನ್ನೂ ಕಸಿಯುತ್ತಿರುವುದು ಆಘಾತಕಾರಿ ವಿಷಯ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದರೂ, ನಿಯಂತ್ರಿಸುವುದು ಸವಾಲಾಗಿದೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 3 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ಇದಕ್ಕೆ ಪುಷ್ಠಿ ನೀಡುತ್ತದೆ. ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುವ ಪ್ರಕಾರ, ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳುತ್ತಿದ್ದರೂ ಶೇ.70 ಪ್ರಕರಣಗಳು ಬೆಳಕಿಗೆ ಬರುವುದೇ ಇಲ್ಲ! ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಅಪಹರಿಸಿ ಬೆದರಿಕೆ, ವೇಶ್ಯಾವೃತ್ತಿಗೆ ತಳ್ಳಲು ಒತ್ತಡ, ಹಣದ ಆಸೆಗಾಗಿ ಮಾರಾಟ, ಬಾಲ ಕಾರ್ವಿುಕರನ್ನು ಅವಧಿ ಮೀರಿ ದುಡಿಸಿಕೊಳ್ಳುವುದು, ಬಾಲ್ಯವಿವಾಹ, ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಬಂಧಿಯಾದ ಬಾಲಕರನ್ನು ಹಿಂಸಿಸುವಂತಹ ದೌರ್ಜನ್ಯಗಳು ದೇಶದಲ್ಲಿ ಎಗ್ಗಿಲ್ಲದೇ ನಡೆಯುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 5 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ 2017ರಲ್ಲಿ ದಾಖಲಾಗಿದ್ದ 1,723 ಪೋಕ್ಸೋ ಪ್ರಕರಣ, 2019ರಲ್ಲಿ 2083ಕ್ಕೆ ಏರಿಕೆಯಾಗಿದೆ.

ಬಾಲ ದೌರ್ಜನ್ಯ ಜೀವಂತ: ಸಮೀಕ್ಷೆಗಳ ಪ್ರಕಾರ, ದೇಶದಲ್ಲಿ ದೌರ್ಜನ್ಯಕ್ಕೊಳಗಾದ 45 ಲಕ್ಷ ಬಾಲಕ/ಬಾಲಕಿಯರಿದ್ದಾರೆ, ಇವರೆಲ್ಲ 5ರಿಂದ 15 ವರ್ಷದ ಒಳಗಿನವರು. ಇದರಲ್ಲಿ ಬಾಲಕಿಯರ ಸಂಖ್ಯೆಯೇ ಅಧಿಕ. ಇದು ಮಕ್ಕಳ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿದೆ. ಎನ್​ಜಿಒಗಳು ದೌರ್ಜನ್ಯಕ್ಕೆ ತುತ್ತಾದ ಮಕ್ಕಳಿಗೆ ಉಚಿತ ಊಟ, ವಸತಿ, ಶಿಕ್ಷಣ ಪೂರೈಸುತ್ತಿವೆ. ಸರ್ಕಾರವೂ ಇವರ ಜತೆ ಕೈ ಜೋಡಿಸಿ ಮಕ್ಕಳಿಗೆ ನೆರವು ನೀಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಠಿಣ ಕಾನೂನು ಕ್ರಮ ಜಾರಿಗೆ ತಂದರೂ, ಬಾಲದೌರ್ಜನ್ಯಗಳು ಜೀವಂತವಾಗಿರುವುದು ವ್ಯವಸ್ಥೆಯ ವೈಫಲ್ಯವನ್ನು ಸಾರಿ ಹೇಳುತ್ತವೆ.
ಇದನ್ನೂ ಓದಿಹಸಿರು ಮೈಸೂರು ತಂಡದಿಂದ 15 ಸಾವಿರ ಸಸಿಗಳನ್ನು ನೆಡಲು ಸಿದ್ಧತೆ
ಸರ್ಕಾರದಿಂದಲೇ ಸವಲತ್ತು
ರಾಜ್ಯದಲ್ಲಿ ದೌರ್ಜನ್ಯಕ್ಕೆ ತುತ್ತಾದ ಬಾಲಕಿಯರು ಹಾಗೂ ಬಾಲಕರಿಗಾಗಿ ಪ್ರತ್ಯೇಕ 27 ಬಾಲ ಮಂದಿರಗಳಿವೆ. ಇಲ್ಲಿ ಶಿಕ್ಷಣದ ಜತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತದೆ. ಶಾಲೆ ತೊರೆದ 14 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಪ್ರಾಯೋಜಕತ್ವ ಕಾರ್ಯಕ್ರಮದಡಿ 1 ಸಾವಿರ ರೂ. ನೀಡಿ ಪ್ರಾಥಮಿಕ ಶಿಕ್ಷಣದ ಖರ್ಚನ್ನು ಸರ್ಕಾರವೇ ಭರಿಸುತ್ತದೆ. ಲೈಂಗಿಕ ದೌರ್ಜನ್ಯಕ್ಕೆ ತುತ್ತಾದ ಮಕ್ಕಳಿಗೆ ಅಭಯ ನಿಧಿ ಯೋಜನೆಯಡಿ ವೈದ್ಯಕೀಯ ಸವಲತ್ತುಗಳನ್ನು ನೀಡಲಾಗುತ್ತದೆ. ಪೋಕ್ಸೋ ಪ್ರಕರಣದಲ್ಲಿ ಕಾನೂನು ನೆರವು ನೀಡಲು ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಕಾನೂನು ತಜ್ಞರನ್ನು ನೇಮಿಸಲಾಗಿದೆ.
ಪೋಕ್ಸೋ ವಿಶೇಷ ನ್ಯಾಯಾಲಯ
ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದ್ದು, ಇಲ್ಲಿರುವ ನೂರಾರು ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲೇ ಇವೆ. 14 ವರ್ಷದೊಳಗಿನ ಮಕ್ಕಳನ್ನು ಬಾಲಕರು ಎಂದು ಘೊಷಿಸಲಾಗಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣ ದಂಡನೆ, 18 ವರ್ಷದೊಳಗಿನ ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಕನಿಷ್ಠ 10 ವರ್ಷ ಕಠಿಣ ಶಿಕ್ಷೆ, 16 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದರೆ 20 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ.
ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿ ಸ್ಥಳಾಂತರಿಸಲು ಸಿಎಂ ಗಡುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
