ಚಿಕ್ಕಬಳ್ಳಾಪುರ:ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣದಲ್ಲಿ ಬಾಲಕಿಯ ತಾಯಿ ಜತೆಗೆ ಐವರನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ಮೂಲದ ಅಪ್ರಾಪ್ತ ಬಾಲಕಿಯ ತಾಯಿ (38), ಆಂಧ್ರ ಪ್ರದೇಶದ ಗಣೇಶ್ (42), ಶಿಡ್ಲಘಟ್ಟದ ಶಿವಕುಮಾರ್, ಮನು ಮತ್ತು ಆನಂದ್ ಬಂಧಿತರು. ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನೆ ಹಿನ್ನೆಲೆಗಂಡನಿಂದ ದೂರವಾಗಿದ್ದ ಆರೋಪಿ ಮಹಿಳೆಯು ಮಗಳೊಂದಿಗೆ ಚಿಕ್ಕಬಳ್ಳಾಪುರದಲ್ಲಿ ವಾಸವಾಗಿದ್ದಳು. ಇದರ ನಡುವೆ ಗಣೇಶ್ ಎಂಬುವರೊಂದಿಗೆ ಅನೈತಿಕ ಸಂಬಂಧವನ್ನಿಟ್ಟುಕೊಂಡಿದ್ದರು. ಇದೇ ಸಲುಗೆಯಲ್ಲಿ ಬಾಲಕಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಹಾಗೆಯೇ ಹಣ ಸಂಪಾದನೆಗಾಗಿ ವೇಶ್ಯಾವಾಟಿಕೆಗೆ ದೂಡಲಾಗಿದೆ. ಇದರ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ವಸತಿ ಬಡಾವಣೆಯಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು 14 ವರ್ಷದ ಬಾಲಕಿಯನ್ನು ರಕ್ಷಿಸಿದ್ದಾರೆ. ತಾಯಿ ಜತೆಗೆ ಐವರನ್ನು ಬಂಧಿಸಿದ್ದಾರೆ.
ಚಿಕ್ಕಮ್ಮಳ ಎದುರು ಅಳಲುಇತ್ತೀಚೆಗೆ ಬೆಂಗಳೂರಿನಲ್ಲಿನ ಚಿಕ್ಕಮ್ಮ ಮೊಬೈಲ್ ಕರೆ ಮಾಡಿ, ಆರೋಗ್ಯ ಕ್ಷೇಮವನ್ನು ವಿಚಾರಿಸಿದ ಸಂದರ್ಭದಲ್ಲಿ ಬಾಲಕಿಯು ಶೋಷಣೆಯ ಪರಿಸ್ಥಿತಿಯನ್ನು ಹೇಳಿಕೊಂಡಿದ್ದಾಳೆ. ಇದರಿಂದ ಆಕೆಯು ಚಿಕ್ಕಬಳ್ಳಾಪುರಕ್ಕೆ ಬಂದು ಪೊಲೀಸರಿಗೆ ದೂರು ನೀಡಿ, ಅಕ್ಕನ ಮಗಳನ್ನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತಡವಾಗಿ ಬೆಳಕಿಗೆ ಬಂದ ಪ್ರಕರಣಕಳೆದ 15 ದಿನಗಳ ಹಿಂದೆ ಪ್ರಕರಣವು ಬೆಳಕಿಗೆ ಬಂದಿದೆ. ಪೊಲೀಸರು ವಿಚಾರಣೆ ನಡೆಸಿದಾಗ ಸ್ವತಃ ತಾಯಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳಲು ಕುಮ್ಮಕ್ಕು ನೀಡುತ್ತಿದ್ದರ ಮಾಹಿತಿ ಬಹಿರಂಗವಾಗಿದೆ. ಇಲ್ಲಿ ಹಣ ಸಂಪಾದನೆಯ ದೃಷ್ಟಿಯಲ್ಲಿ ಹೆತ್ತ ಮಗಳ ಬದುಕನ್ನು ಬಲಿಕೊಡಲಾಗುತ್ತಿತ್ತು. ಈಗಾಗಲೇ ಬಾಲಕಿಗೆ ಕೌನ್ಸೆಲಿಂಗ್ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ರಕ್ಷಣಾ ಘಟಕ ಮತ್ತು ಪೊಲೀಸ್ ಅಧಿಕಾರಿಗಳು ಮುಗ್ಧ ಬಾಲಕಿಯ ರಕ್ಷಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × four =
Remember me
