ಬೆಂಗಳೂರು: ಮಕ್ಕಳ ದಿನ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ನ.14ರಿಂದ 2021 ಜನವರಿ 24ರವರೆಗೆ 10 ವಾರಗಳ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಅಭಿಯಾನ ಮತ್ತು ಗ್ರಾಮ ಪಂಚಾಯ್ತಿಗಳಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ’ ನಡೆಸುವ ಕಾರ್ಯಕ್ರಮ ರೂಪಿಸಿದೆ.
ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರೂಪಿಸಿರುವ ಕಾರ್ಯಕ್ರಮವಾಗಿದೆ.ಮಕ್ಕಳ ಸಮಸ್ಯೆಗಳು, ಬೇಡಿಕೆಗಳು, ಪ್ರಶ್ನೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಹಾಗೂ ಅಭಿಯಾನ ಕುರಿತು ತಮ್ಮ ವ್ಯಾಪ್ತಿಯ ಜಿಲ್ಲಾ ಹಂತದಲ್ಲಿ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳಬೇಕು. ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಬಳಕೆ ಮತ್ತು ಸೈಬರ್ ಅಪರಾಧ ಕುರಿತು ಜಾಗೃತಿ ಮೂಡಿಸುವುದು. ಮಕ್ಕಳ ಹಕ್ಕುಗಳ ಕ್ಲಬ್ ತೆರೆಯುವುದು, ಅನಾಥ ಮಕ್ಕಳ ಮನೆಗೆ ಭೇಟಿ ನೀಡಿ ಅವರ ಕಷ್ಟಗಳನ್ನು ಆಲಿಸುವುದು, ಗ್ರಂಥಾಲಯಗಳಿಗೆ ಮಕ್ಕಳನ್ನು ನೋಂದಣಿ ಮಾಡಿಸುವುದು ಈ ಎಲ್ಲ ಕೆಲಸಗಳನ್ನು ಮಾಡಬೇಕು. ಇದಕ್ಕಾಗಿ ತಾಲೂಕು ಶಿಕ್ಷಣ ಸಂಯೋಜಕರು, ಸಿಆರ್‌ಪಿ ಮತ್ತು ಬಿಆರ್‌ಪಿ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಪರಿಣಾಮಕಾರಿಯಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಅಭಿಯಾನ ಅನುಷ್ಠಾನ ಮಾಡಿ ಇಲಾಖೆಗೆ ವರದಿ ಕಳುಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಎಲ್ಲ ಡಿಡಿಪಿಐ, ಬಿಇಒಗಳಿಗೆ ಸೂಚನೆ ನೀಡಿದ್ದಾರೆ.
ಮಕ್ಕಳ ಹಕ್ಕುಗಳ ಸಪ್ತಾಹ: ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾಕೇಂದ್ರ ನ.14ರಿಂದ 20ರವರೆಗೆ ‘ಮಕ್ಕಳ ಹಕ್ಕುಗಳ ಸಪ್ತಾಹ’ ಆಯೋಜಿಸಿದೆ. ಮಕ್ಕಳು, ಹಿರಿಯರನ್ನು ಒಂದೆಡೆ ಸೇರಿಸುವುದು ಸಪ್ತಾಹದ ಪ್ರಮುಖ ವಿಷಯವಾಗಿದೆ. ಕರೊನಾ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಈ ಕಾರ್ಯಕ್ರಮ ನಡೆಸುತ್ತಿದೆ. ಮಕ್ಕಳು ಭಾಗವಹಿಸಬೇಕಾದಲ್ಲಿ 72045 30275 ಇದಕ್ಕೆ ಕರೆ ಮಾಡಿ ಲಿಂಕ್ ಪಡೆಯಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 2 =
Remember me
