ರಾಮನಗರ:ಕೆಲವು ದಿನಗಳಿಂದ ರಾಜ್ಯದಲ್ಲಿ ಉಂಟಾಗಿರುವ ಮಕ್ಕಳ ಕಳ್ಳರ ಆತಂಕ ಮತ್ತೆ ಮುನ್ನೆಲೆಗೆ ಬಂದಿದ್ದು, ಏಳು ಮಂದಿಯನ್ನು ಮಕ್ಕಳ ಕಳ್ಳರು ಎಂಬ ಶಂಕೆಯ ಮೇರೆಗೆ ಹಿಡಿದ ಸಾರ್ವಜನಿಕರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂದಹಾಗೆ ಈ ಪ್ರಕರಣ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿರುವ ರಾಮನಗರದಲ್ಲಿ ನಡೆದಿದೆ.
ರಾಮನಗರದ ಟಿಪ್ಪು ಟೌನ್​ನಲ್ಲಿ ಇಂದು ಬುರ್ಖಾ ಧರಿಸಿ ಕಾರಿನಲ್ಲಿ ಬಂದಿದ್ದ ಏಳು ಮಂದಿ ಅಪರಿಚಿತರನ್ನು ಮಕ್ಕಳ ಕಳ್ಳರು ಎಂಬ ಶಂಕಿಸಿದ ಸಾರ್ವಜನಿಕರು ಅವರಿಗೆ ಥಳಿಸಿದ್ದಾರೆ. ಆ ಏಳು ಮಂದಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಮನಗರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರಿಂದ ಅಪರಿಚಿತ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ.
ವಾರದ ಹಿಂದೆ ವಿಜಯನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲೂ ಮಕ್ಕಳ ಕಳ್ಳರ ಆತಂಕ ಸೃಷ್ಟಿಯಾಗಿತ್ತು. ಸೆ. 18ರಂದು ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಹಿಂದಿ ಮಾತನಾಡುತ್ತ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದವನನ್ನು ಮಕ್ಕಳ ಕಳ್ಳ ಎಂದು ಭಾವಿಸಿದ ಗ್ರಾಮಸ್ಥರು, ಗ್ರಾಮದ ಮಧ್ಯ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ಮಹಿಳೆಯೊಬ್ಬಳನ್ನು ಮಕ್ಕಳ ಕಳ್ಳಿ ಎಂದುಕೊಂಡು ಸ್ಥಳೀಯರು ಕೂಡಿ ಹಾಕಿ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು.
ರಾಜ್ಯಾದ್ಯಂತ ಮಕ್ಕಳ ಕಳ್ಳರು?; ಜನರ ಕೈಗೆ ಸಿಕ್ಕಿಹಾಕಿಕೊಂಡ ಇಬ್ಬರ ಪೈಕಿ ಒಬ್ಬನ ಜೇಬಲ್ಲಿದ್ದವು ಮಕ್ಕಳ ಫೋಟೋಗಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
