ಮಂಡ್ಯ:ರಾಜ್ಯದಲ್ಲಿ ಮುಂಗಾರು ಮಳೆ ದುರ್ಬಲಗೊಂಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಹಲವು ಭಾಗಗಳು ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಮುಂಗಾರು ದೇಶಕ್ಕೆ ಆಗಮಿಸಿ ಹಲವು ದಿನಗಳೇ ಕಳೆದರೂ ಮಳೆಯ ಸುಳಿವೇ ಇಲ್ಲ ಹೀಗಾಗಿ ಜನರು ಮಳೆಗಾಗಿ ವಿಚಿತ್ರ ಆಚರಣೆಗಳ ಮೊರೆ ಹೋಗುತ್ತಿದ್ದಾರೆ.
ಮಳೆಗಾಗಿ ಕತ್ತೆಗಳ ಮದುವೆ, ಕಪ್ಪೆಗಳ ಮದುವೆ ಮಾಡುತ್ತಾರೆ. ಆದರೆ ಸಕ್ಕೆರೆನಾಡಿನ ಜನರು ಮಳೆಗಾಗಿ ಪ್ರಾರ್ಥಿಸಿ ರಾತ್ರಿ ವೇಳೆ ಮಕ್ಕಳ ಮದುವೆ ಮಾಡಿದ್ದಾರೆ. ಈ ವಿಚಿತ್ರ ಸಂಪ್ರದಾಯದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಇದನ್ನೂ ಓದಿ:ವಿದ್ಯಾರ್ಥಿನಿ ಜತೆ ಟ್ಯೂಷನ್​ ಶಿಕ್ಷಕಿಯ ಅಕ್ರಮ ಸಂಬಂಧ: ಕಿಡ್ನಾಪ್​ ಪ್ರಕರಣಕ್ಕೆ ಸ್ಫೋಟಕ ತಿರುವು
ಕೆ.ಆರ್.ಪೇಟೆ ತಾಲೂಕಿ‌ನ ಗಂಗನಹಳ್ಳಿ ಗ್ರಾಮದಲ್ಲಿ, ಎರಡು ಗಂಡು ಮಕ್ಕಳಲ್ಲಿ ಒಬ್ಬ ಹುಡುಗನಿಗೆ ಹೆಣ್ಣಿನ ವೇಷ ಧರಿಸಿ‌ ಇಬ್ಬರಿಗೂ ಸಂಪ್ರದಾಯದಂತೆ ಮದುವೆ ಮಾಡಿದ್ದಾರೆ. ಮದುವೆಯ ಬಳಿಕ ಗ್ರಾಮಸ್ಥರೆಲ್ಲರು ಸೇರಿ ಜನರಿಗೆ ಊಟ ಹಾಕಿಸಿದ್ದಾರೆ.
ಈ ವಿಚಿತ್ರ ಮದುವೆ ಸಂಪ್ರದಾಯದ ಆಚರಣೆಯಿಂದ ಮಳೆ ಬರುತ್ತದೆ ಎಂಬ ನಂಬಿಕೆ‌ ಇಲ್ಲಿನ ಜನರಿಗೆ ಇದೆ.ಈ ವಿಚಿತ್ರ ಆಚರಣೆಯ ಮದುವೆ ಸಂಪ್ರದಾಯಕ್ಕೆ ಸಕ್ಕರೆನಾಡಿನ ಗ್ರಾಮಸ್ಥರು‌ ಸಾಕ್ಷಿಯಾಗಿದ್ದಾರೆ.
ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ಅಕ್ರಮವಾಗಿ ಸಾಗಿಸುತ್ತಿದ್ದ 7 ದನಗಳು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 13 =
Remember me
