ಬೆಂಗಳೂರು:ಚೀನಾ ಪ್ಲಸ್ ಒನ್ ನೀತಿ ಲಾಭ ಪಡೆಯುವ ಕಾರ್ಯತಂತ್ರದ ಭಾಗವಾಗಿ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಜತೆಗೆ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಂಗಳವಾರ ಚರ್ಚಿಸಿದರು.
ರಾಜ್ಯಕ್ಕೆ ವಿದೇಶಿ ಬಂಡವಾಳ ಸೆಳೆಯುವ ಉದ್ದೇಶದಿಂದ ಎಂ.ಬಿ.ಪಾಟೀಲ ನೇತೃತ್ವದ ಉನ್ನತಮಟ್ಟದ ನಿಯೋಗ ಅಮೆರಿಕ ಪ್ರವಾಸದಲ್ಲಿದ್ದು, ಐಎಂಎ್ ಉಪ ನಿರ್ದೇಶಕಿ ಗೀತಾ ಗೋಪಿನಾಥ್ ಮತ್ತಿತರ ಉನ್ನತಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದ ಮಾತುಕತೆ ನಡೆಸಿತು.
ಚೀನಾದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಭಾರತದಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಯೋಜನೆಗಳನ್ನು ಹಾಕಿಕೊಳ್ಳುತ್ತಿವೆ. ಕರ್ನಾಟಕವು ಆಯಕಟ್ಟಿನ ಸ್ಥಳದಲ್ಲಿದೆ ಎಂದು ಗಮನಸೆಳೆಯಿತು.
ಬೆಂಗಳೂರಿಗೆ ಹೆಚ್ಚಿನ ಹೂಡಿಕೆ ಆಕರ್ಷಿಸಲು ನಗರ ದಟ್ಟಣೆ ತಗ್ಗಿಸುವುದು, ಕೌಶಲ್ಯಯುಕ್ತ ಕಾರ್ಮಿಕರ ಕೊರತೆ ಉಂಟಾಗದಂತೆ ನೀತಿ ರೂಪಿಸುವ ಅಗತ್ಯ ಕುರಿತು ಎಂ.ಬಿ.ಪಾಟೀಲ ಪ್ರಸ್ತಾಪಿಸಿ ಚರ್ಚಿಸಿದರು.
ಮುಂಚೂಣಿ ವಿಮಾನ ತಯಾರಿಕಾ ಕಂಪನಿ ಬೋಯಿಂಗ್ ಜೊತೆ ನಡೆದ ಸಭೆಯಲ್ಲಿ ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರಗಳ ಸ್ಥಾಪನೆ, ಪೈಲಟ್ ಹಾಗೂ ವಿಮಾನ ಸಿಬ್ಬಂದಿ ತರಬೇತಿ ಕ್ಷೇತ್ರದಲ್ಲಿ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಗಮನ ಸೆಳೆಯಲಾಯಿತು.
ಯುಎಸ್‌ಐಎಸ್ ಪಿಎಫ್ (ಯುಎಸ್- ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟನರ್ಶಿಪ್ ಫೋರಂ) ಜತೆಗೂ ಚರ್ಚೆಯಾಯಿತು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ನಿರ್ಮಾಣವಾಗಲಿರುವ ಆರೋಗ್ಯ ತಂತ್ರಜ್ಞಾನ ಪಾರ್ಕ್‌ನಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಅವಲೋಕಿಸಲಾಯಿತು.
ಕರ್ನಾಟಕದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪೂರಕವಾದ ನೀತಿಗಳನ್ನು ಅನುಸರಿಸುವ ಅಗತ್ಯವಿದೆ ಎಂಬ ಸಲಹೆ ವ್ಯಕ್ತವಾಯಿತು. ಇದೇ ಸಂದರ್ಭದಲ್ಲಿ ಎಂ.ಬಿ.ಪಾಟೀಲ ಅವರು ಮಾತನಾಡಿ, ಇ-ಆಡಳಿತ ಮತ್ತು ಸ್ಥಳೀಯ ಸಂಸ್ಥೆ ಗಳ ಮುಂದಿರುವ ಕೆಲವು ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನದ ನೆರವು ಪಡೆಯಲು ಸಮರ್ಥ ಪಾಲುದಾರಿಕೆಗಾಗಿ ಶೋಧನೆ ನಡೆಸಲಾಗುವುದು ಎಂದರು.
ಇಂಡಸ್ಟ್ರಿ 4.0 ಸಂಬಂಧಿಸಿದ ಕೌಶಲಗಳ ಕಲಿಕೆಗೆ ಪೂರಕವಾಗಿ ತರಬೇತಿ ಪಠ್ಯಕ್ರಮಗಳನ್ನು ಸಿದ್ದಪಡಿಸುವ ಬಗ್ಗೆಯೂ ವಿಚಾರ ವಿನಿಮಯ ನಡೆಯಿತು. ಜಿಇ ವೆರ್ನೋವ ಸಭೆಯಲ್ಲಿ ಕರ್ನಾಟಕದಲ್ಲಿ ಕಾಂಪೋನೆಂಟ್‌ಗಳ ತಯಾರಿಕೆ, ಸೌರಶಕ್ತಿ, ಪವನ ಶಕ್ತಿ ಮತ್ತಿತರ ಪರ್ಯಾಯ ಇಂಧನಗಳ ಸಂಗ್ರಹ ವ್ಯವಸ್ಥೆ ಸ್ಥಾಪನೆ ಸಂಬಂಧ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಜಿಇ ಹೆಲ್ತ್ ಕೇರ್ ಜತೆಗೆ ಮುಂಬರುವ ದಶಕದಲ್ಲಿ ಜೀವ ವಿಜ್ಞಾನಗಳ ಕ್ಷೇತ್ರದಲ್ಲಿ ಎಐ/ಎಂಎಲ್ ನಿರ್ಣಾಯಕ ಪಾತ್ರ ವಹಿಸಲಿರುವ ನಿರೀಕ್ಷೆಯಿರುವುದರಿಂದ ಅದಕ್ಕೆ ತಕ್ಕಂತೆ ಉದ್ಯೋಗಿಗಳ ಕೌಶಲವನ್ನು ಮೇಲ್ದರ್ಜೆಗೇರಿಸಲು ಸಹಭಾಗಿತ್ವಗಳನ್ನು ಸಾಧಿಸುವ ಬಗ್ಗೆ ಚರ್ಚಿಸಲಾಯಿತು.
ಬೋಯಿಂಗ್ ಉಪಾಧ್ಯಕ್ಷರಾದ ಗ್ರೆಟಾ ಲಂಡ್ ಬರ್ಗ್, ನಿರ್ದೇಶಕರಾದ ನಿಕೋಲ ಪೊರ್ರೆಕಾ, ಯುಎಸ್‌ಐ ಪಿಎಫ್ ಸಿಇಒ ಮುಕೇಶ್ ಅಘಿ, ಉಪಾಧ್ಯಕ್ಷರಾದ ಸೂಸನ್ ರಿಚಿ, ಜಿಇ ವೆರ್ನೋವಾ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್ ಪಿಕ್ಯಾರ್ಟ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
