ಚಿಕ್ಕಬಳ್ಳಾಪುರ:ಎರಡು ಮಕ್ಕಳ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.
ನಳಿನಿ (36) ಮೃತ ದುರ್ದೈವಿ. ಶಿಡ್ಲಘಟ್ಟ ಮೂಲದ ನಳಿನಿಯನ್ನು 16 ವರ್ಷದ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬುವರ ಜತೆ ಮದುವೆ ಮಾಡಲಾಗಿತ್ತು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸುಖವಾಗಿ ಸಂಸಾರ ಮಾಡಬೇಕಿದ್ದ ನಳಿನಿಯನ್ನ ಗಂಡನ ಹಣದಾಹವೇ ಬಲಿ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ.ಇದನ್ನೂ ಓದಿರಿನೂರಾರು ಕನಸಿನೊಂದಿಗೆ ದಾಪಂತ್ಯಕ್ಕೆ ಕಾಲಿಟ್ಟವಳ ಬದುಕಲ್ಲಿ ದುರಂತ, ತವರು ಮನೆಯಲ್ಲೇ ಯುವತಿ ಆತ್ಮಹತ್ಯೆ
ಮದುವೆ ಆದ ಕೆಲ ವರ್ಷಗಳ ಬಳಿಕ ವರದಕ್ಷಿಣೆ ತರುವಂತೆ ನಳಿನಿಯನ್ನು ಗಂಡ ಹೊಡೆದು ತವರು ಮನೆಗೆ ಕಳುಹಿಸುತ್ತಿದ್ದನಂತೆ. ಹಣಕ್ಕಾಗಿ ಮಾನಸಿಕ-ದೈಹಿಕ ಹಿಂಸೆ ನೀಡುತ್ತಿದ್ದ. ನನ್ನ ಮಗಳು ಗಂಡನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವರದಕ್ಷಿಣೆ ಕಿರುಕುಳ ಕೊಟ್ಟು ಮಗಳ ಸಾವಿಗೆ ಆಕೆಯ ಗಂಡನೇ ಕಾರಣ ಆಗಿದ್ದಾನೆ. ನಮಗೆ ನ್ಯಾಯ ಕೊಡಿಸಿ ಮೃತಳ ತಾಯಿ ಒತ್ತಾಯಿಸಿದ್ದಾರೆ. ಅಮ್ಮನನ್ನು ಕಳೆದುಕೊಂಡ ಹೆಣ್ಣುಮಕ್ಕಳಿಬ್ಬರ ಆಕ್ರಂದನ ಮುಗಿಲು ಮುಟ್ಟಿತ್ತು.
ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + nineteen =
Remember me
