ಬೆಂಗಳೂರು:ಸ್ಯಾಂಡಲ್​ವುಡ್​ ನಟ ದಿ. ಚಿರಂಜೀವಿ ಸರ್ಜಾರ ಪತ್ನಿ ಮೇಘನಾ ರಾಜ್​ ಅವರಿಗೆ ಭಾನುವಾರ ಸೀಮಂತ ಶಾಸ್ತ್ರ ನಡೆದಿದೆ. ಮೇಘನಾ ತುಂಬು ಗರ್ಭಿಣಿ. ಎರಡೂ ಕುಟುಂಬಗಳು ಚಿರು ಅಗಲಿಕೆಯ ನೋವಿನಲ್ಲಿದ್ದು, ಸರಳವಾಗಿ ಸೀಮಂತ ಶಾಸ್ತ್ರ ನೆರವೇರಿಸಲಾಗಿದೆ. ಕುಟುಂಬದ ಆಪ್ತರಷ್ಟೇ ಶುಭ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಚಿರು ಮತ್ತು ಮೇಘನಾ ಇಬ್ಬರೂ 2018ರಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ಎರಡೇ ವರ್ಷಕ್ಕೆ ಅಂದರೆ 2020ರ ಜೂನ್​ 7ರಂದು ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದರು. ಅಂದಿನಿಂದ ದುಃಖದ ಮಡುವಿನಲ್ಲೇ ಇರುವ ಎರಡೂ ಕುಟುಂಬ ಚಿರು ಮಗುವಿನ ಆಗಮನಕ್ಕಾಗಿ ಕಾಯುತ್ತಿದೆ.
ಪತಿಯ ದೊಡ್ಡ ಕಟೌಟ್​ ಅನ್ನು ಪಕ್ಕದಲ್ಲೇ ಇಟ್ಟುಕೊಂಡು ಮೇಘನಾ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ. ಆ ಮೂಲಕ ಚಿರು ತನ್ನ ಜತೆಯಲ್ಲೇ ಇದ್ದಾರೆ ಎಂದು ಭಾವಿಸಿದ್ದಾರೆ. ಮೇಘನಾರ ಸೀಮಂತ ಶಾಸ್ತ್ರದ ಫೋಟೋಗಳು ಇಲ್ಲಿವೆ.


ನಿಮ್ಮ ಪ್ರೀತಿಗೆ ನಾನು ಚಿರಋಣಿ … ಅಭಿಮಾನಿಗಳಿಗೆ ಮೇಘನಾ ರಾಜ್​ ಪತ್ರ

ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 1 =
Remember me
