ಚಿತ್ರದುರ್ಗ:ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಯುವತಿಯೊಬ್ಬಳು ದೂರು ದಾಖಲಿಸಿದ್ದು, ಆರೋಪಿ ಉಮೇಶ್​ ಸಂತ್ರಸ್ತ ಯುವತಿಗೆ ಸೋದರ ಮಾವನಾಗಬೇಕು. 5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್​ ಪೆಕ್ಟರ್ ಆಗಿದ್ದರು. ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ‌ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ಬಳಿಕ ಮತ್ತೆ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದ ಸಂದರ್ಭದಲ್ಲಿ ಅತ್ಯಾಚಾರ ನಡೆದಿದ್ದು, ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಅಂದಹಾಗೆ ಸಿಪಿಐ ಉಮೇಶ್​ಗೆ ಈ ಮೊದಲೇ ಇಬ್ಬರು ಹೆಂಡತಿಯರಿದ್ದಾರೆ. ಮೂರನೇ ಪತ್ನಿಯ ರೀತಿ ನನ್ನ ಜೊತೆ ಇರು ಎಂದು ಯುವತಿಗೆ ಒತ್ತಾಯಿಸುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.
ಬೇಡಿಕೆಗೆ ವಿರೋಧ ಮಾಡಿದ್ದಲ್ಲಿ ದಾವಣಗೆರೆಯ ನಿವೇಶನ ನಿಮಗೆ ಸಿಗದಂತೆ ಮಾಡುತ್ತೇನೆ. ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವ ಆರೋಪವು ಉಮೇಶ್​ ಮೇಲಿದೆ. ಈ ಹಿನ್ನೆಲೆಯಲ್ಲಿ 376 ಕ್ಲಾಸ್ (2)(k)(n), 323 , 504, 506 ಐಪಿಸಿ ಸೆಕ್ಷನ್​ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಉಮೇಶ್ ನಾಪತ್ತೆಯಾಗಿದ್ದಾರೆ.(ಏಜೆನ್ಸೀಸ್​)
ಪಾಕ್​ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಅಫ್ಘಾನಿಸ್ತಾನದಲ್ಲಿ ಸಂಭ್ರಮಾಚರಣೆ, ವಿಡಿಯೋ ವೈರಲ್​

ಗುರೂಜಿ ಆಕೆಯನ್ನಷ್ಟೇ ಹೊಗಳುತ್ತಿದ್ದರು; ಪ್ರಿಯಾಂಕಾ ನನಗಿಂತ ಉತ್ತಮ ಡಾನ್ಸರ್ ಎಂದ ಕತ್ರಿನಾ

ದೀಪಾವಳಿ ಸಂಭ್ರಮದಲ್ಲಿ ರಶ್ಮಿಕಾ: ಶೂಟಿಂಗ್​ಗೆ ರಜೆ ಹಾಕಿ ಮನೆಯಲ್ಲಿ ಹಬ್ಬ ಆಚರಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × four =
Remember me
