ಚಿತ್ರದುರ್ಗ:ಅತ್ಯಾಚಾರ ಪ್ರಕರಣ ದಾಖಲಾದ ಬೆನ್ನಲ್ಲೇ ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಸೋಮವಾರ (ಅ.24) ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಹಿನ್ನೆಲೆಯುವತಿಯೊಬ್ಬಳು ಜಿ.ಬಿ.ಉಮೇಶ್​ ವಿರುದ್ಧ ಚಿತ್ರದುರ್ಗದ ಮಹಿಳಾ ಪೊಲೀಸ್​ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಉಮೇಶ್​ ಸಂತ್ರಸ್ತ ಯುವತಿಗೆ ಸೋದರ ಮಾವನಾಗಬೇಕು. 5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್​ ಪೆಕ್ಟರ್ ಆಗಿದ್ದರು. ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ‌ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ಬಳಿಕ ಮತ್ತೆ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದ ಸಂದರ್ಭದಲ್ಲಿ ಅತ್ಯಾಚಾರ ನಡೆದಿದ್ದು, ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಅಂದಹಾಗೆ ಸಿಪಿಐ ಉಮೇಶ್​ಗೆ ಈ ಮೊದಲೇ ಇಬ್ಬರು ಹೆಂಡತಿಯರಿದ್ದಾರೆ. ಮೂರನೇ ಪತ್ನಿಯ ರೀತಿ ನನ್ನ ಜೊತೆ ಇರು ಎಂದು ಯುವತಿಗೆ ಒತ್ತಾಯಿಸುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.
ಬೇಡಿಕೆಗೆ ವಿರೋಧ ಮಾಡಿದ್ದಲ್ಲಿ ದಾವಣಗೆರೆಯ ನಿವೇಶನ ನಿಮಗೆ ಸಿಗದಂತೆ ಮಾಡುತ್ತೇನೆ. ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವ ಆರೋಪವು ಉಮೇಶ್​ ಮೇಲಿದೆ. ಈ ಹಿನ್ನೆಲೆಯಲ್ಲಿ 376 ಕ್ಲಾಸ್ (2)(k)(n), 323 , 504, 506 ಐಪಿಸಿ ಸೆಕ್ಷನ್​ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಉಮೇಶ್ ನಾಪತ್ತೆಯಾಗಿದ್ದು, ಅವರ ಶೋಧ ಕಾರ್ಯ ನಡೆಯುತ್ತಿದೆ. ಆರೋಪ ಬಂದ ಬೆನ್ನಲ್ಲೇ ಐಪಿಜಿ ಅಮಾನತು ಮಾಡಿದ್ದಾರೆ.(ಏಜೆನ್ಸೀಸ್​)
ಕೊನೇ ಎಸೆತದಲ್ಲಿ ಭಾರತಕ್ಕೆ ರೋಚಕ ಗೆಲುವು: ರಾಹುಲ್​ ಡ್ರಾವಿಡ್​ ಸಂಭ್ರಮಿಸಿದ ಪರಿ ಕಂಡು ಹುಬ್ಬೇರಿಸಿದ ನೆಟ್ಟಿಗರು

ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ನಿಧನ

ಕೊಹ್ಲಿಯಿಂದ ಮಾತ್ರ ಅಂತಹ ಸಿಕ್ಸರ್ ಸಿಡಿಸೋದಕ್ಕೆ ಸಾಧ್ಯ; ಹಾರ್ದಿಕ್ ಪಾಂಡ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + nine =
Remember me
