ಚಿತ್ರದುರ್ಗ:ಲೋಕಸಭಾ ಚುನಾವಣೆ ಪ್ರಚಾರಕ್ಕೆ ಎಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:T20 World Cup: ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಮನೋಜ್ ತಿವಾರಿ!
ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸುತ್ತಿದ್ದ ಸಚಿವ ಜಮೀರ್ ಅಹಮ್ಮದ್ ಅವರು ಇಂದು (ಸೋಮವಾರ) ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು.
ಈ ಸಂದರ್ಭದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅವರಿಗೆ ಆಸ್ಪತ್ರೆ ಹೃದ್ರೋಗ ತಜ್ಞ ಡಾ.ಕಾರ್ತಿಕ್ ಅವರು ಸಚಿವರಿಗೆ ಚಿಕಿತ್ಸೆ ನೀಡಿದ್ದಾರೆ.
ಸಚಿವರಿಗೆ ECG, ಇಸಿಜಿ, ಇಕೋ ಹಾಗೂ ರಕ್ತ ಪರೀಕ್ಷೆ ನಡೆಸಲಾಗಿದೆ. ಇಸಿಜಿ ಮತ್ತು ಎಕೋ ನಾರ್ಮಲ್ ಎಂದು ವರದಿ ಬಂದಿದೆ. ರಕ್ತ ಪರೀಕ್ಷೆಯ ವರದಿ ಬರಬೇಕಿದೆ. ಸಚಿವ ಜಮೀರ್ ಅವರನ್ನು ಆಸ್ಪತ್ರೆಯಿಂದ ಇದೀಗ ಡಿಸ್ಚಾರ್ಜ್ ಮಾಡಲಾಗಿದೆ.
ಡಿಸ್ಚಾರ್ಜ್​ ಬಳಿಕ ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ಖಾನ್ ಅವರು​, ಮುಂಜಾನೆ ಒಡೆ ತಿಂದ ಕಾರಣಕ್ಕೆ ಗ್ಯಾಸ್ಟ್ರಿಕ್‌ ಸಮಸ್ಯೆ ಆಗಿತ್ತು. ಇಸಿಜಿ, ಎಕೋ ಎಲ್ಲಾ ನಾರ್ಮಲ್ ಇದೆ. ಕೆಲ ಹೊತ್ತಿನ ಬಳಿಕ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದಾರೆ.
ನಿಮ್ಮ ಕಣ್ಣಿಗೊಂದು ಸವಾಲ್​: ಜಸ್ಟ್​ 10 ಸೆಕೆಂಡ್​ನಲ್ಲಿ ಈ ಚಿತ್ರದಲ್ಲಿರುವ ಸಿಂಹವನ್ನು ಹುಡುಕಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
