ಬೆಂಗಳೂರು:ಹೆಚ್ಚಾದ ತಾಪಮಾನದ ಪರಿಣಾಮವಾಗಿ ಕಾಲರಾ ರೋಗ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ 6 ಮಂದಿಯಲ್ಲಿ ಕಾಲರಾ ರೋಗ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ್ದಾರೆ.  ಬಿಸಿಲ ತಾಪ ಹೆಚ್ಚಾಗುತ್ತಿರೋದು, ಬಿಸಿಗಾಳಿಯ ಪರಿಣಾಮವೇ ಕಾಲರಾ ಹೆಚ್ಚಳಕ್ಕೆ ಕಾರಣ ಎಂಬುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಬ್ಬರಿಗೆ ಕಾಲರಾ ದೃಢಪಟ್ಟರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂವರಿಗೆ ಕಾಲರಾ ಸೋಂಕು ತಗುಲಿರೋದು ಪರೀಕ್ಷೆಯಲ್ಲಿ ತಿಳಿದು ಬಂದಿದೆ. ರಾಮನಗರದಲ್ಲಿ ಒಬ್ಬ ವ್ಯಕ್ತಿ ಸೇರಿದಂತೆ 6 ಮಂದಿಗೆ ಕಾಲರಾ ದೃಢಪಟ್ಟಿದೆ.
ರಾಜ್ಯದಲ್ಲಿ ಕಾಲರಾ ತಡೆಗಾಗಿ ಆರೋಗ್ಯ ಇಲಾಖೆ ಕ್ರಮವಹಿಸಿದೆ. ಇಂದು ತಡರಾತ್ರಿ ರಾಜ್ಯದಲ್ಲಿ ಕಾಲರಾ ರೋಗ ತಡೆ ಸಂಬಂಧ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದರು.
ಬಿಸಿಗಾಳಿ ಹೆಚ್ಚಾಗುತ್ತಿರೋ ಕಾರಣ ವ್ಯಕ್ತಿಯೊಬ್ಬರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ರಂದೀಪ್ ಹೇಳಿದರು.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮೇ.4 ಕೊನೆ ದಿನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 4 =
Remember me
