ಶಿವಮೊಗ್ಗ:ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಕಾಲೇಜಿನ ಪ್ರಾಚಾರ್ಯ ಹಾಗೂ ಏಷ್ಯಾದ ಎರಡನೇ ಅತಿ ದೊಡ್ಡ ಚರ್ಚ್‌ನ ಪಾದ್ರಿಯೊಬ್ಬರನ್ನು ಪೋಕ್ಸೋ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಇದನ್ನೂ ಓದಿ:ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿ ಜಾತಿ ನಿಂದನೆ; ಶಿವಮೊಗ್ಗದ ಪಾದ್ರಿ ಅರೆಸ್ಟ್​
ಬಿ.ಎಚ್.ರಸ್ತೆಯಲ್ಲಿರುವ ಚರ್ಚ್‌ನ ಪಾದ್ರಿ ಫ್ರಾನ್ಸಿಸ್ ಫರ್ನಾಂಡೀಸ್ ಬಂಧಿತರು. ಇವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಜಾತಿ ನಿಂದನೆ ಕೂಡ ಮಾಡಿದ್ದರು ಎಂದು ಸಂತ್ರಸ್ತೆ ಕೋಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:ಕ್ಯಾಥೋಲಿಕ್ ಪಾದ್ರಿಗಳಿಂದ 5 ಸಾವಿರ ಮಕ್ಕಳ ಮೇಲೆ ದೌರ್ಜನ್ಯ
ಚರ್ಚ್​ನ ಫಾದರ್ ಫ್ರಾನ್ಸಿಸ್ ಫರ್ನಾಂಡೀಸ್ ಅವರನ್ನು ನ್ಯಾಯಾಲಯದ ಎದುರು ಪೊಲೀಸರು ಹಾಜರುಪಡಿಸಿದ್ದು ಈ ಸಂದರ್ಭ ಅವರ ಮೇಲೆ ಮುತ್ತಿಗೆ ಹಾಕುವ ಯತ್ನ ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆಯಿಂದ ಫಾದರ್ ರನ್ನು ನ್ಯಾಯಾಲಯಕ್ಕೆ ಪೊಲೀಸರು ಕರೆದೊಯ್ಯುವಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ:ಯುವತಿಯೊಂದಿಗೆ ಪಾದ್ರಿ ನೃತ್ಯ: ವಿಡಿಯೋ ಪೋಸ್ಟ್ ಮಾಡಿದ ಕಾಲಿವುಡ್ ನಟ ಅರೆಸ್ಟ್
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಾಗೂ ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಫಾದರ್​ರನ್ನು ಕೋರ್ಟ್​ಗೆ ಕರೆದೊಯ್ಯುವ ವೇಳೆ ಪ್ರತಿಭಟನೆಯ ಕಾವು ಏರಿದ್ದು ಬಂಜಾರ ಯುವಕರು ಫಾದರ್ ಫ್ರಾನ್ಸಿಸ್ ಫರ್ನಾಂಡಿಸ್​ರ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಯುವಕರು, ಫಾದರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + five =
Remember me
