ಬೆಂಗಳೂರು:ಸಿಐಡಿ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಚರಣ್​ರೆಡ್ಡಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು.
ಹಲವು ತಿಂಗಳಿಂದ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿತ್ತು. ಕಳೆದ ತಿಂಗಳು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದಿದ್ದ ಅಕ್ರಮ ಗಣಿಗಾರಿಕೆ ತನಿಖೆ ನಡೆಸಿದ ಲೋಕಾಯುಕ್ತ ಸಂಸ್ಥೆಯ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಇವರು ಸೇವೆ ಸಲ್ಲಿಸಿದ್ದರು.
ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್​ ಆಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು. ಸಿಬಿಐನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಸಿಐಡಿಗೆ ವರ್ಗಾವಣೆಯಾಗಿದ್ದರು.
ಮೃತರ ಪಾರ್ಥಿವ ಶರೀರವನ್ನು ಸಂಜಯನಗರದಲ್ಲಿರುವ ಅವರ ನಿವಾಸಕ್ಕೆ ರವಾನಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. (ದಿಗ್ವಿಜಯ ನ್ಯೂಸ್​)
ರಕ್ತಕಣ್ಣೀರು ಸುರಿಸುತ್ತಿರುವ ಷೇರುಪೇಟೆ ಹೂಡಿಕೆದಾರರು: ಆರಂಭಿಕ ಟ್ರೇಡ್​ನಲ್ಲಿ ಸೆನ್ಸೆಕ್ಸ್ 3,000 ಅಂಶ ಕುಸಿತ, 45 ನಿಮಿಷ ವಹಿವಾಟು ಬಂದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 8 =
Remember me
