ಬೆಂಗಳೂರು:ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ 2012-13, ಹಾಗೂ 2014-15ರ ಸಹ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದಾಳಿ ನಡೆಸಲಾಗಿದ್ದು, 38 ಶಿಕ್ಷಕರನ್ನು ಬಂಧಿಸಲಾಗಿದೆ.
ಸಹ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕುರಿತು ಆ. 12ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಇದೇ ಅಕ್ರಮಕ್ಕೆ ಸಂಬಂಧಿಸಿದಂತೆ ಸೆ. 29ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ಈ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿರುತ್ತದೆ. ಈ ಪ್ರಕರಣಗಳ ತನಿಖೆ ನಡೆಸಿದ ಸಿಐಡಿ ಇದುವರೆಗೆ ಶಿಕ್ಷಕರು ಮತ್ತು ನಿರ್ದೇಶಕರು ಸೇರಿದಂತೆ ಒಟ್ಟು 22 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದೆ.
ಈ ಮಧ್ಯೆ ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ನಷ್ಟು ಶಿಕ್ಷಕರು ಅಕ್ರಮವಾಗಿ ನೇಮಕವಾಗಿರುತ್ತಾರೆ ಎಂದು ನೀಡಿದ ವರದಿ ಮೇರೆಗೆ ಸಿಐಡಿ ಘಟಕದಿಂದ ಆರೋಪಿಗಳ ಪತ್ತೆಗಾಗಿ 30 ವಿಶೇಷ ತಂಡಗಳನ್ನು ರಚಿಸಿದ್ದು, ಇಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 51 ಸ್ಥಳಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ನೇಮಕವಾಗಿದ್ದ 38 ಜನ ಶಿಕ್ಷಕರನ್ನು ಬಂಧಿಸಲಾಗಿದೆ.
ಕೋಲಾರ ಜಿಲ್ಲೆಯಿಂದ 24, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಯಿಂದ ತಲಾ ಐವರು ಶಿಕ್ಷಕರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಕಾರ್ಯ ಮುಂದುವರಿದಿದೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಸಿಐಡಿಯ ಈ ಕಾರ್ಯಾಚರಣೆಯಲ್ಲಿ 18 ಡಿವೈಎಸ್‌ಪಿ, 14 ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!

ಬೈಕ್​ನಲ್ಲಿ ಹೋಗುತ್ತಿದ್ದಾಗಲೇ ಸಾವು!; ದ್ವಿಚಕ್ರವಾಹನ ಚಲಾಯಿಸುತ್ತಿರುವಾಗ ಬಡಿದ ಸಿಡಿಲು..

ಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಮತ್ತಿಬ್ಬರ ಬಂಧನ, ಆರೋಪಿಗಳ ಸಂಖ್ಯೆ 22ಕ್ಕೆ ಏರಿಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 3 =
Remember me
