|ಹರೀಶ್ ಬೇಲೂರುಬೆಂಗಳೂರು
ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಸೇರಿ ಇತರ ಯೋಜನೆಗಳಲ್ಲಿ ನಡೆದಿರುವ ಅಕ್ರಮಗಳ ಸಂಬಂಧ ಸಿಐಡಿ ತನಿಖೆ ಶುರುವಾಗಿದೆ. ಗೃಹ ಇಲಾಖೆ ಸದ್ಯದಲ್ಲೇ ತನಿಖೆಗೆ ಅಧಿಕಾರಿಯೊಬ್ಬರನ್ನು ನಿಯೋಜಿಸಲಿದೆ. ನಕಲಿ ದಾಖಲೆ ಸಲ್ಲಿಸಿ ಟೆಂಡರ್ ಪಡೆದಿರುವುದು, ಅನುದಾನ ದುರುಪಯೋಗ ಆಗಿರá-ವುದು ಹಾಗೂ ಶಾಮೀಲಾಗಿರುವ ಅಧಿಕಾರಿಗಳ ಪಾತ್ರ ಸೇರಿದಂತೆ ಸಮಗ್ರ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ.
ಹಗರಣದ ಸಂಬಂಧ ಈಗಾಗಲೇ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕೆಎಎಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಡಿಪಿಆರ್​ಗೆ ಶಿಫಾರಸು ಮಾಡಿದ್ದಾರೆ. ಡಿಪಿಎಆರ್​ನಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಡತ ಕಳುಹಿಸಲಾಗಿದೆ. ಕಳಂಕಿತ ಅಧಿಕಾರಿ ಅಮಾನತಿಗಾಗಿ ಮುಖ್ಯ ಕಾರ್ಯದರ್ಶಿಯು ಸಿಎಂಗೆ ಕಡತ ರವಾನಿಸಿದ್ದಾರೆ.
ಗಂಗಾ ಕಲ್ಯಾಣ, ನೇರ ಸಾಲ, ಉದ್ಯಮಶೀಲತಾ, ಮೈಕ್ರೋ ಕ್ರೆಡಿಟ್, ಸಮೃದ್ಧಿ ಸೇರಿ ಇತರ ಯೋಜನೆಗಳಲ್ಲಿ ಭ್ರಷ್ಟಾಚಾರ, ಅನುದಾನ ಮತ್ತು ಅಧಿಕಾರ ದುರ್ಬಳಕೆ ಆರೋಪದಲ್ಲಿ ಸಿಲುಕಿದ್ದರೂ ಆರೋಪಿತ ಅಧಿಕಾರಿಗಳನ್ನು ಎತ್ತಂಗಡಿ ಮಾಡದೆ ಅದೇ ಹುದ್ದೆಯಲ್ಲಿ ಮುಂದುವರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲ ಸಂಘಟನಗಳು ಸರ್ಕಾರಕ್ಕೆ ದೂರು ಸಲ್ಲಿಸಿವೆ.
ಡಾ.ಅಂಬೇಡ್ಕರ್ ನಿಗಮದಲ್ಲಿ ಗಂಗಾ ಕಲ್ಯಾಣ ಯೋಜನೆ ಸೇರಿ ಇತರ ಯೋಜನೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದೆ. ನಿಗಮದ ಎಂಡಿ ಸುರೇಶ್​ಕುಮಾರ್ ಅಮಾನತು ಪಡಿಸಲು ಸಿಎಂ ಅವರಿಗೆ ಕಡತ ಕಳುಹಿಸಲಾಗಿದೆ.
|ಕೋಟ ಶ್ರೀನಿವಾಸ ಪೂಜಾರಿಸಮಾಜ ಕಲ್ಯಾಣ ಇಲಾಖೆ ಸಚಿವ
ಪ್ರಕರಣವೇನು?:ಗಂಗಾ ಕಲ್ಯಾಣ ಸೇರಿ ಬೇರೆ ಬೇರೆ ಯೋಜನೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ನಿಗಮದ ಎಂಡಿ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ದೂರು ನೀಡಿತ್ತು. ದೂರಿನ ಅನ್ವಯ ವಿರುದ್ಧ ನಿಗಮದ ಅಂದಿನ ಎಂಡಿಯಾಗಿದ್ದ ಸುರೇಶ್ ನಾಯ್್ಕ ತನಿಖೆ ನಡೆಸಿ ವರದಿಯನ್ನು ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದರು.
ಈ ವರದಿಯಲ್ಲಿ ಸುರೇಶ್​ಕುಮಾರ್, ಗಂಗಾ ಕಲ್ಯಾಣ ಯೋಜನೆಯ ಪಂಪ್​ಸೆಟ್ ಸರಬರಾಜುದಾರರಿಗೆ ಅವಕಾಶ ಇಲ್ಲದಿದ್ದರೂ ಐದು ವರ್ಷಗಳಿಂದ ವ್ಯಾಟ್ ಮತ್ತು ಜಿಎಸ್​ಟಿ ವ್ಯತ್ಯಾಸದ ಮೊತ್ತ 3 ಕೋಟಿ ರೂ. ಪಾವತಿಸಿರುವುದು, ಸರ್ಕಾರದ ಆದೇಶ ಉಲ್ಲಂಘಿಸಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ 5 ಸಾವಿರ ಫಲಾನುಭವಿಗಳನ್ನು ನೇರವಾಗಿ ಆಯ್ಕೆ ಮಾಡಿರುವುದು, ಇದಕ್ಕಾಗಿ 25 ಕೋಟಿ ರೂ. ಮಂಜೂರು ಮಾಡಿರುವುದು, ಐರಾವತ ಮತ್ತು ಸಮೃದ್ಧಿ ಯೋಜನೆಯಡಿ ಒಟ್ಟು 72 ಫಲಾನುಭವಿಗಳನ್ನು ನೇರವಾಗಿ ಆಯ್ಕೆ ಮಾಡಿರುವ ವಿಚಾರಗಳು ಬಹಿರಂಗವಾಗಿದ್ದವು. ಅಲ್ಲದೆ, 25 ಕೋಟಿ ರೂ. ಅನುದಾನ ಬಳಸಿಕೊಳ್ಳುವ ಮುನ್ನ ಸರ್ಕಾರದ ಆದೇಶವಾಗಲೀ ಅಥವಾ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯದೆ ನಿಗಮದ ಅಧ್ಯಕ್ಷರ ಟಿಪ್ಪಣಿ ಆಧಾರದ ಮೇಲೆ ಪರಿಗಣಿಸಿರುವುದು ಸೇರಿ ಸರ್ಕಾರ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿತ್ತು. ಸರ್ಕಾರ ಸುರೇಶ್ ಕುಮಾರ್ ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರೂ ಕೆಐಟಿಯಿಂದ ತಡೆಯಾಜ್ಞೆ ತಂದು ಎಂಡಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ.
ಕೆಲವೇ ಗಂಟೆಗಳ ಅಂತರದಲ್ಲಿ ಒಂದೇ ಥರ ಸಾವಿಗೀಡಾದ ಅವಳಿ ಸಹೋದರರು!; 900 ಕಿ.ಮೀ. ದೂರದಲ್ಲಿ ನಡೆಯಿತು ವಿಚಿತ್ರ ಘಟನೆ!

ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
