ಧಾರವಾಡ:545 ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣ ದಿನೇದಿನೆ ಗಂಭೀರವಾಗುತ್ತಿದ್ದು, ಬಗೆದಷ್ಟೂ ಆಳ ಎಂಬಂತಾಗಿದೆ. ಈ ಮಧ್ಯೆ ಕೆಎಎಸ್​ ಕೋಚಿಂಗ್ ಸೆಂಟರ್​​ನ ವ್ಯಕ್ತಿಯೊಬ್ಬನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದ್ದಂತಿದೆ.
ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ಸಂಬಂಧ ಧಾರವಾಡ ಜಿಲ್ಲೆಯ ಖಾಸಗಿ ಕೋಚಿಂಗ್ ಸೆಂಟರ್​​ನ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ. ಕೆಎಎಸ್​ ಕೋಚಿಂಗ್ ಸೆಂಟರ್​ನ ಈ ವ್ಯಕ್ತಿ ಇಂಜಿನಿಯರಿಂಗ್ ಹಿನ್ನೆಲೆಯವನಾಗಿರುತ್ತಾನೆ.
ವಿಚಾರಣೆಗೆ ಒಳಗಾಗಿರುವ ಈ ವ್ಯಕ್ತಿ ಕೆಲವು ದಿನಗಳ ಹಿಂದೆ ಕೆಎಎಸ್​ ಕೋಚಿಂಗ್ ಪಡೆಯಲೆಂದು ಧಾರವಾಡಕ್ಕೆ ಆಗಮಿಸಿದ್ದು, ಪ್ರಕರಣಕ್ಕೂ ಈತನಿಗೂ ಸಂಬಂಧ ಇರುವ ಸಂದೇಹದ ಮೇರೆಗೆ ವಶಕ್ಕೆ ಪಡೆಯಲಾಗಿದೆ. ಈತನನ್ನು ಧಾರವಾಡದಲ್ಲಿ ಅಜ್ಞಾತ ಸ್ಥಳವೊಂದಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಎಲ್ಲರ ಮಂಪರು ಪರೀಕ್ಷೆ ನಡೆಯಲಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಕುರಿತು ನಿವೃತ್ತ ಪೊಲೀಸ್ ಕಮಿಷನರ್ ಪ್ರತಿಕ್ರಿಯೆ

ಬೆಳಗಾವಿಯಿಂದ ಹೊರಟ ವಿಮಾನಕ್ಕೆ ಹಕ್ಕಿ ಡಿಕ್ಕಿ; ಇಂಜಿನ್ ಬ್ಲೇಡ್​ಗೆ ಹಾನಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 + 19 =
Remember me
