ಬೆಂಗಳೂರು:ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಹೈಗ್ರೌಂಡ್ಸ್ ಪೊಲೀಸರು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ ಒಂಭತ್ತು ಅಭ್ಯರ್ಥಿಗಳನ್ನು ಶನಿವಾರ ಬಂಧಿಸಿದ್ದಾರೆ.
ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 22 ಅಭ್ಯರ್ಥಿಗಳ ಓಎಂಆರ್ ಶೀಟ್‌ನಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅಂತಹ ಅಭ್ಯರ್ಥಿಗಳ ವಿರುದ್ಧ ಸಿಐಡಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡ ಹೈಗ್ರೌಂಡ್ಸ್ ಪೊಲೀಸರು ಸದ್ಯ 9 ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾದ ಅಭ್ಯರ್ಥಿಗಳನ್ನು ಸದ್ಯದಲ್ಲೇ ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಸಿಐಡಿ ವಿಚಾರಣೆ ಬಳಿಕವೇ ಈ ಅಭ್ಯರ್ಥಿಗಳು ಯಾವ ರೀತಿಯಲ್ಲಿ ಲಾಬಿ ಮಾಡಿದ್ದಾರೆ? ಇವರಿಗೆ ಸಹಕಾರ ನೀಡಿದವರು ಯಾರು? ಎಂಬಿತ್ಯಾದಿ ಮಾಹಿತಿ ಬೆಳಕಿಗೆ ಬರಲಿದೆ.
2ನೇ ಎಫ್​ಐಆರ್:ಪಿಎಸ್‌ಐ ಅಕ್ರಮದ ಕುರಿತು ಕಲಬುರಗಿಯ ಚೌಕ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿತ್ತು. ಹೈಗ್ರೌಂಡ್ಸ್ ಠಾಣೆಯಲ್ಲಿ ಎರಡನೇ ಎಫ್‌ಐಆರ್ ದಾಖಲಾಗಿದೆ.
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ನಿರಾಕರಿಸುವುದು ಸಂವಿಧಾನವನ್ನು ನಿರಾಕರಿಸಿದಂತೆ: ನಟಿ ಕಂಗನಾ ರಣಾವತ್​

ಎಚ್​ಡಿಕೆ-ಸಿಪಿವೈ ಮೇಲಾಟ; ತಹಶೀಲ್ದಾರ್​​ಗಳಿಗೆ ಪೀಕಲಾಟ, ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ವರ್ಗಾವಣೆ ಹುಡುಗಾಟ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
