ಬೆಂಗಳೂರು:ಸಿಗರೇಟ್ ಹಣ ಕೇಳಿದ್ದಕ್ಕೆ ಕಾಂಡಿಮೆಂಟ್ಸ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಮಾಡಿದ್ದ ನಾಲ್ವರು ಕಿಡಿಗೇಡಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುಟ್ಟೇನಹಳ್ಳಿಯ 14ನೇ ಮುಖ್ಯರಸ್ತೆಯ ನಿವಾಸಿ ‘ಮಂಜುನಾಥ್ ಕಾಂಡಿಮೆಂಟ್ಸ್’ ಮಾಲೀಕ ಮಂಜುನಾಥ್ ಶೆಟ್ಟಿ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದಾರೆ. ಹಲ್ಲೆ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧರಿಸಿ ನಾಲ್ವರನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಮಂಜುನಾಥ್ ಅವರು, ಪುಟ್ಟೇನಹಳ್ಳಿಯಲ್ಲಿ ಕಾಡಿಮೆಂಟ್ಸ್ ನಡೆಸುತ್ತಿದ್ದು, ಸೋಮವಾರ ಮಧ್ಯಾಹ್ನ ಬಂದಿದ್ದ ಆರೋಪಿಗಳು, ಏಕಾಏಕಿ ಬಂಡಲ್‌ಗೆ ಕೈ ಹಾಕಿ ಸಿಗರೇಟ್ ತೆಗೆದುಕೊಂಡಿದ್ದಾರೆ. ಇದಕ್ಕೆ ಆಕ್ಷೇಪಿಸಿ ಹಣ ನೀಡುವಂತೆ ಆರೋಪಿಗಳಿಗೆ ಮಾಲೀಕ ಸೂಚಿಸಿದ್ದಾನೆ. ಈ ಮಾತಿಗೆ ಕೆರಳಿದ ದುಷ್ಕರ್ಮಿಗಳು, ಮಾಲೀಕನ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಈ ಘಟನೆ ಸಂಬಂಧ ಸಂತ್ರಸ್ತ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
64ನೇ ವಯಸ್ಸಿನಲ್ಲಿ ಮೂರನೇ ಮದುವೆ! ಹಿರಿಯ ನಟಿ ಜಯಸುಧಾ ಕೊಟ್ಟ ಸ್ಪಷ್ಟನೆ ಹೀಗಿದೆ…

ಸಮನ್ವಯ-ಸಹಕಾರ ಅಗತ್ಯ; ಲೆಫ್ಟಿನೆಂಟ್ ಗವರ್ನರ್ ವಿರುದ್ಧ ದೆಹಲಿ ಸಿಎಂ ಪ್ರತಿಭಟನೆ

ಟ್ಯಾಟೂಗೆ Irreplaceable ಪದ ಆರಿಸಿಕೊಂಡಿದ್ದೇಕೆ? ರಶ್ಮಿಕಾ ಕೊಟ್ಟ ಕುತೂಹಲಕಾರಿ ಉತ್ತರ ಹೀಗಿತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
