ಬೆಂಗಳೂರು:ನಗರ ಸಂಚಾರ ಪೊಲೀಸ್ ವಿಭಾಗವು ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹಾಗೂ ಬಾಂಧವ್ಯ ಸಾಧಿಸುವ ನಿಟ್ಟಿನಲ್ಲಿ ಡಿ.10ರಂದು ನಗರದ 44 ಸಂಚಾರ ಪೊಲೀಸ್ ಠಾಣೆಗಳಲ್ಲಿ ‘ನಾಗರಿಕ ಸಂಚಾರ ವೇದಿಕೆ’ ಸಭೆ ಹಮ್ಮಿಕೊಂಡಿದೆ.
ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳಲ್ಲಿ ಸುಗಮ ಸಂಚಾರ ಜಾರಿಗೊಳಿಸಲು ಹಾಗೂ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಅಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರ ವರೆಗೆ ಈ ಸಭೆ ನಡೆಯಲಿದೆ. ಸಂಚಾರ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲಿದ್ದಾರೆ. ಜತೆಗೆ ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ವೃದ್ಧಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಲಹೆ ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ನೀಡುವ ಉತ್ತಮ ಸಲಹೆಗಳನ್ನು ಪರಿಗಣಿಸಿ ಅವುಗಳನ್ನು ನಿಯಮಗಳನ್ನಾಗಿ ಪರಿವರ್ತಿಸಿ ಕಾರ್ಯಗತಗೊಳಿಸಲಾಗುವುದು.
ಸಾರ್ವಜನಿಕರು ಸಂಚಾರದ ಬಗ್ಗೆ ತಮ್ಮ ದೂರು- ಅಹವಾಲುಗಳನ್ನು ಸಲ್ಲಿಸಬಹುದು. ಅಂತೆಯೇ ಹಿಂದಿನ ಪ್ರಕರಣಗಳ ಬಗ್ಗೆ ವಿವರ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಬಹುದು. ಹೀಗಾಗಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ಮುಕ್ತವಾಗಿ ನೀಡಬೇಕು. ಈ ಮೂಲಕ ನಗರದಲ್ಲಿ ಸುಗಮ ಸಂಚಾರ ಜಾರಿ ಹಾಗೂ ಅಪಘಾತಗಳ ತಡೆಗೆ ಸಂಚಾರ ಪೊಲೀಸರೊಂದಿಗೆ ಸಹಕರಿಸುವಂತೆ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಒಂದೇ ರಾತ್ರಿ 2 ಬಾರಿ ಸಂಭೋಗಿಸಲು ನಿರಾಕರಿಸಿದ ಪತ್ನಿಯನ್ನೇ ಕೊಂದು ಹೈಡ್ರಾಮ! ಈತ ಕಟ್ಟಿದ ಕಥೆ ಅಷ್ಟಿಷ್ಟಲ್ಲ

ಬಾಳು ಕೊಡ್ತೀನಿ… ಎಂದು ಪುಸಲಾಯಿಸಿ ಆಕೆಯ ಮನೆಯಲ್ಲೇ ಇದ್ದವ ಹೀಗಾ ಮಾಡೋದು? ಎಲ್ಲವನ್ನೂ ಕಳೆದುಕೊಂಡಾಕೆಯ ಗೋಳಿನ ಕಥೆ ಇದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
