ವಿಜಯಪುರ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ. ಇಂದು ಮುದ್ದೇಬಿಹಾಳದಲ್ಲಿ ಸಿಎಎ ಹಾಗೂ ಎನ್​ಆರ್​ಸಿ ವಿರೋಧಿಸಿ ಮುಸ್ಲಿಂ ಹಾಗೂ ದಲಿತಪರ ಸಂಘಟನೆಗಳು ಬೃಹತ್​ ಪ್ರತಿಭಟನೆ ನಡೆಸಿವೆ.
ಮುದ್ದೇಬಿಹಾಳದ ಕಿಲ್ಲಾದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದ್ದು ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಆರ್​ಎಸ್​ಎಸ್​ ವಿರುದ್ಧ ಘೋಷಣೆಗಳನ್ನು ಕೂಗುತ್ತ ಸಾಗಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶ ಒಡೆಯುವ ಉದ್ದೇಶ ಹೊಂದಿದೆಯೇ? ರಕ್ತಪಾತದ ಇಚ್ಛೆ ನಿಮಗೆ ಇದೆಯೇ? ಶಾಂತಿಯುತ ರಾಷ್ಟ್ರದಲ್ಲಿ ಅಶಾಂತಿಯ ಬೀಜ ಬಿತ್ತುತ್ತಿದ್ದೀರಿ ಎಂದು ಮಾಜಿ ಶಾಸಕ ಸಿ.ಎಸ್​.ನಾಡಗೌಡ ಅಪ್ಪಾಜಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಲ್ಲದೆ, ಮತಬ್ಯಾಂಕ್​ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
