ಬೆಂಗಳೂರು:118 ಕೋಟಿ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ ಆರೋಪದಡಿ 8 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಇಂಜಿನಿಯರ್‌ಗಳನ್ನು ಕರ್ನಾಟಕದ ನಗರಾಭಿವೃದ್ಧಿ ಇಲಾಖೆ ಅಮಾನತುಗೊಳಿಸಿದೆ.
ಇದನ್ನೂ ಓದಿ:ಅಡುಗೆ ತಯಾರಿಯಲ್ಲಿದ್ದ ಮಹಿಳೆಯರ ಮೇಲೇ ಬಿದ್ದ ಶಾಮಿಯಾನ; ಒಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ
ಹಗರಣದ ತನಿಖೆಗಾಗಿ ರಾಜ್ಯ ಸರ್ಕಾರವು(State Government)ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಿದ್ದು, 2022ರ ಜನವರಿಯಲ್ಲಿ ನಡೆದ ಆಪಾದಿತ ಹಗರಣದ ತನಿಖೆಯ ನಂತರ ಕರ್ನಾಟಕ ಲೋಕಾಯುಕ್ತರು ಸಲ್ಲಿಸಿದ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಆದಿಪುರುಷ್​ ಸಿನಿಮಾಗೆ ಮತ್ತೊಂದು ಸಂಕಷ್ಟ: ಚಿತ್ರ ಪ್ರದರ್ಶನಕ್ಕೆ ತಡೆ
ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್(DK Suresh)2020ರ ಸೆಪ್ಟೆಂಬರ್​ನಲ್ಲಿ ಭ್ರಷ್ಟಾಚಾರ ವಿರೋಧಿ ಸಾರ್ವಜನಿಕ ತನಿಖಾಧಿಕಾರಿಗೆ ದೂರು ನೀಡಿದ್ದ ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಂಡಿದೆ. ಬಿಬಿಎಂಪಿಯು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ(KRDIL)ಮೂಲಕ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಿತ್ತು. ಅಮಾನತು ಆದೇಶದಲ್ಲಿ, “ಎರಡು ಯೋಜನೆಗಳಲ್ಲಿ ಕಾಮಗಾರಿಗಳು ಟೆಂಡರ್ ನಿರ್ದಿಷ್ಟವಾಗಿಲ್ಲ. ಸುಮಾರು 118 ಕೋಟಿ ಸಾರ್ವಜನಿಕ ಹಣವನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಉಲ್ಲೇಖವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 15 =
Remember me
