ಮೈಸೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆದಿದೆ.
ಕಲ್ಲು ತೂರಾಟ ಮಾತ್ರವಲ್ಲದೆ, ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಕಾರ್ಯಕರ್ತ ನಾಗೇಶ್ ಎಂಬುವರ ಕಾಲಿಗೆ ಪೆಟ್ಟಾಗಿದ್ದು, ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಕಲ್ಲು ತೂರಾಟ ನಡೆದಿದೆ. ಪ್ರಚಾರ ರಥದಲ್ಲಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಇದ್ದರು. ಸ್ವಲ್ಪದರಲ್ಲೇ ಇಬ್ಬರು ಪಾರಾಗಿದ್ದಾರೆ.
ಇದನ್ನೂ ಓದಿ:ತಾಳಿಕೋಟೆಯಲ್ಲಿ ಅಬ್ಬರಿಸಿದ ರಾಜಾಹುಲಿ; ಭಾವೈಕ್ಯತೆ ಸಂದೇಶ ಸಾರಿದ ಬಿಎಸ್​ವೈ
ದಿಗ್ವಿಜಯ ನ್ಯೂಸ್ ಜತೆ ಬಿಜೆಪಿ ಕಾರ್ಯಕರ್ತ ಹಾಗೂ ಘಟನೆ ಸ್ಥಳದಲ್ಲಿದ್ದ ರವಿಶಂಕರ್ ಮಾತನಾಡಿದ್ದು, ಸಿದ್ದು ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸಂಜೆ ಸಿದ್ದರಾಮನಹುಂಡಿಯಲ್ಲಿ ಸೋಮಣ್ಣ ಪ್ರಚಾರ ನಡೆಸುತ್ತಿದ್ದರು. ಏಕಾಏಕಿ ಸಿದ್ದರಾಮಯ್ಯಗೆ ಜೈ, ಸೋಮಣ್ಣಗೆ ಧಿಕ್ಕಾರ ಎಂದು ಕೂಗಿದರು. ಕಲ್ಲು ತೂರಾಟ ನಡೆಸಿ ಕಾರುಗಳನ್ನು ಜಖಂಗೊಳಿಸಿದರು. ದೊಣ್ಣೆಯಿಂದ ಹಲ್ಲೆ ಮಾಡಿದರು. ಈ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್​ಗೆ ಕಾಲು ಮತ್ತು ಕೈಗೆ ಪೆಟ್ಟಾಗಿದೆ. ಈ ಘಟನೆ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ಆಪ್ತ ಕುಮಾರ್ ಪೊಲೀಸರಿಗೆ ಕರೆ ಮಾಡಿ ಪ್ರಭಾವ ಬೆಳೆಸಿ ಮೂವರನ್ನು ಬಿಡುಗಡೆಗೊಳಿಸಿದ್ದಾರೆ. ಘಟನೆ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುತ್ತೇವೆ ಎಂದಿದ್ದಾರೆ.
ಸದ್ಯ ಘಟನೆ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಜೆ.ಸಿ. ರಸ್ತೆಯ ವಾಣಿಜ್ಯ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಉತ್ತರ ಪ್ರದೇಶದ ಯುವಕ ಸಾವು

ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಜಾಗ ಕೇಳಿದ ಕಾನೂನು ವಿವಿ

ಬೆತ್ತಲೆಯಾಗಿ ನಟಿಸಲು ರೆಡಿಯಾಗಿರುವಾಗ ಲಿಪ್​ಲಾಕ್​ ಕಷ್ಟವೇ ಅಲ್ಲ: ಅಮಲಾ ಪೌಲ್​ ಬೋಲ್ಡ್​ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 4 =
Remember me
