ರಾಯಚೂರು:ಸಿಂಧನೂರಿನಲ್ಲಿ ನಿರ್ಮಾಣವಾಗಿರುವ ನೂತನ ರಂಗಮಂದಿರಕ್ಕೆ ಪುನೀತ್​ ರಾಜ್​​ಕುಮಾರ್ ಹೆಸರಿಡುವ ವಿಚಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನಡೆದಿದ್ದು, ಪಿಎಸ್ಐ ಮಣಿಕಂಠ ಥಳಿತಕ್ಕೊಳಗಾಗಿದ್ದಾರೆ.
ಸಿಂಧನೂರು ನಗರದ ಸುಕಾಲಪೇಟೆ ರಸ್ತೆಯಲ್ಲಿ ನೂತನ ರಂಗ ಮಂದಿರ ನಿರ್ಮಾಣವಾಗಿದ್ದು, ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ ನಾಡಗೌಡ ಪುನೀತ್ ರಾಜಕುಮಾರ್ ಹೆಸರಿಡಲು ಒತ್ತಾಯಿಸಿದ್ದಾರೆ. ಆದರೆ ಕಾಂಗ್ರೆಸ್ ಆಡಳಿತದಲ್ಲಿರುವ ನಗರಸಭೆ ಪುನೀತ್ ಹೆಸರಿಡಲು ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಕಲಾವಿದರ ಹೆಸರಿಡಲು ಮುಂದಾಗಿದೆ.
ಇದನ್ನೂ ಓದಿ:ಹಾಸನ | ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಮೆಡಿಕಲ್ ಅಂಗಡಿ ಮಾಲೀಕ
ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಗಲಾಟೆ ನಡೆದಿದ್ದು, ನಗರದ ಎಪಿಎಂಸಿಯಿಂದ ರಂಗಮಂದಿರದ ವರೆಗೆ ಅಪ್ಪು ಪುತ್ಥಳಿ ಮೆರವಣಿಗೆ ವೇಳೆ ವಾಗ್ವಾದ ನಡೆದಿದೆ. ಈ ವೇಳೆ ಶಾಸಕರ ಪುತ್ರ ಅಭಿಷೇಕ್ ನಾಡಗೌಡ ಸಿಂಧನೂರು ಗ್ರಾಮೀಣ ಠಾಣೆ ಪಿಎಸ್‌ಐ ಮಣಿಕಂಠ ಅವರ ಕಾಲರ್ ಪಟ್ಟಿ ಎಳೆದು, ಹಲ್ಲೆ ಮಾಡಿದ್ದಾನೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × four =
Remember me
