ಬೆಂಗಳೂರು:ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಆದ್ಯತಾ ಪಟ್ಟಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಗೊತ್ತುಪಡಿಸಿದ್ದಾರೆ.
ಅನಗತ್ಯ ಗೊಂದಲ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡೆತಡೆ ತಪ್ಪಿಸುವ ಉದ್ದೇಶದಿಂದ ಟಿಪ್ಪಣಿಯೊಂದನ್ನು ಇಲಾಖೆ ಅಧಿಕಾರಿಗಳಿಗೆ ರವಾನಿಸಿದ್ದಾರೆ. ಇದಕ್ಕಾಗಿಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದ ಕಾರ್ಯಪಡೆಯನ್ನು ರಚಿಸಿದ್ದಾರೆ.
ಅಲ್ಲದೆ, ಕಳೆದ ಒಂದು ತಿಂಗಳಲ್ಲಿ ಮಾಡಿರುವ ಒತ್ತುವರಿ ತೆರವಿನ ವಲಯವಾರು ವಿವರಗಳನ್ನು ಚಿತ್ರಸಹಿತ ಕಚೇರಿಗೆ ಒದಗಿಸಬೇಕ ಎಂದು ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆಯಿತ್ತಿದ್ದಾರೆ.
ಅರಣ್ಯ ಒತ್ತುವರಿ ಹಾಗೂ ಒತ್ತುವರಿದಾರನ ಪಟ್ಟಾ ಜಮೀನು ಸೇರಿ ಮೂರು ಎಕರೆಗಿಂತ ಕಡಿಮೆ ಇರುವ ಒತ್ತುವರಿದಾರರನ್ನು ಒಕ್ಕಲೆಬ್ಬಿಸಬಾರದು ಎಂಬ ಆದೇಶಕ್ಕೆ ಒಳಪಟ್ಟು, ಅನುಸೂಚಿತ ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ನಿಯಮಗಳಡಿ ಯಾರೇ ಅರಣ್ಯವಾಸಿ ಅನುಸೂಚಿತ ಬುಡಕಟ್ಟಿನ ವ್ಯಕ್ತಿ ಅಥವಾ ಇತರೆ ಪಾರಂಪರಿಕ ಅರಣ್ಯವಾಸಿಗಳು ಅರ್ಜಿ ಹಾಕಿದ್ದರೆ,
ಅದು ಸುಪ್ರೀಂ ಕೋರ್ಟ್ ಆದೇಶದನ್ವಯ ಪುನರ್ ಪರಿಶೀಲನೆಗೆ ಬಾಕಿಯಿಲ್ಲದ ಪ್ರಕರಣಗಳನ್ನು ಖಾತ್ರಿಪಡಿಸಿಕೊಂಡು ಅರಣ್ಯ ಜಮೀನು ಒತ್ತುವರಿ ತೆರವಿಗೆ ಸೂಚಿಸಿದ್ದಾರೆ.
ಸಚಿವರ ತಿಳಿಸಿರುವ ಪ್ರಕಾರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್, ಹೋಂ ಸ್ಟೇ, 30 ಎಕರೆಗಿಂತ ಹೆಚ್ಚಿನ ವಿಸ್ತೀರ್ಣ, 10 ರಿಂದ 30 ಎಕರೆ ಮತ್ತು ಮೂರರಿಂದ 10 ಎಕರೆವರೆಗಿನ ಅರಣ್ಯ ಭೂಮಿ ಒತ್ತುವರಿ ತೆರವುಗೊಳ್ಳಲಿದೆ.
ಜತೆಗೆ 64ಎ ಪ್ರಕ್ರಿಯೆ ಬಾಕಿ ಅಥವಾ ನ್ಯಾಯಾಲಯಗಳಲ್ಲಿ ಪ್ರಕರಣ ಬಾಕಿಯಿದ್ದಲ್ಲಿ ಇವುಗಳ ತ್ವರಿತ ವಿಲೇವಾರಿಗೆ ಕ್ರಮಕೈಗೊಂಡು ಒತ್ತುವರಿಗೆ ಸೂಕ್ತ ಕ್ರಮವಹಿಸಬೇಕು ಎಂದು ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:ten − five =
Remember me
