ಬೆಂಗಳೂರು:ಸರ್ಕಾರಿ ಒತ್ತುವರಿ ಜಮೀನುಗಳ ಪ್ರಾಥಮಿಕ ಒತ್ತುವರಿ ಪಟ್ಟಿಯನ್ನು ಶೀಘ್ರದಲ್ಲಿ ತಯಾರಿಸಿ ಹಾಗೂ ಪ್ರತೀ ವಾರಾಂತ್ಯದಲ್ಲಿ ಒತ್ತುವರಿ ತೆರವಿಗೆ ಮುಂದಾಗಿ ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ.
ವಿಕಾಸ ಸೌಧದಲ್ಲಿ ಸರ್ಕಾರ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ/ಗ್ರಾಮೀಣ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಆಯುಕ್ತರ ಸಭೆಯಲ್ಲಿ ಒತ್ತುವರಿ ತೆರವಿಗೆ ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಆದೇಶಿಸಿದ್ದಾರೆ.
ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಬೆಂಗಳೂರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಮೀನು ಒತ್ತುವರಿ ಅತಿದೊಡ್ಡ ಸಮಸ್ಯೆಯಾಗಿದೆ. ಸರ್ಕಾರದ ಜಮೀನು ಭೂ ಮಾಫಿಯಾ ಪಾಲಾಗುತ್ತಿದೆ. ಪರಿಣಾಮ ಸರ್ಕಾರಕ್ಕೆ ಸಾಕಷ್ಟು ಆದಾಯವೂ ಖೋತಾ ಆಗುತ್ತಿದೆ. ಹೀಗಾಗಿ ಅಧಿಕಾರಿಗಳು ಶೀಘ್ರದಲ್ಲಿ ಒತ್ತುವರಿ ಜಮೀನಿನ ಪ್ರಾಥಮಿಕ ಪಟ್ಟಿ ಸಿದ್ದಪಡಿಸಿ, ಪ್ರತೀ ಶನಿವಾರ ಹಾಗೂ ಭಾನುವಾರ ಒತ್ತುವರಿ ತೆರವಿಗೆ ಮುಂದಾಗಬೇಕು ಎಂದು ತಿಳಿಸಿದರು.
ಕಳೆದ ಅಧಿವೇಶನದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವಿನ ಬಗ್ಗೆ ನಮ್ಮ ಸರ್ಕಾರ ಮಾತು ನೀಡಿದೆ. ಕೊಟ್ಟ ಮಾತಿನಂತೆ ಒತ್ತುವರಿ ತೆರವಿನ ಜತೆಗೆ ಸರ್ಕಾರಿ ಜಮೀನನ್ನು ರಕ್ಷಿಸುವ ಕೆಲಸವೂ ಆಗಬೇಕು. ಸರ್ಕಾರಿ ಜಮೀನಿನ ಸುತ್ತ ಸುರಕ್ಷಿತ ಬೇಲಿ ಹಾಕಬೇಕು, ಪ್ರತಿವಾರ ಅಧಿಕಾರಿಗಳು ಬೀಟ್ ಹಾಕುವ ಮೂಲಕ ಸರ್ಕಾರಿ ಸ್ವತ್ತನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗೋಮಾಳ, ಸ್ಮಶಾನದ ಭೂಮಿ, ಕೆರೆ-ಕಟ್ಟೆಗಳೂ ಸಹ ಒತ್ತುವರಿ ಆಗಿದೆ. ಹೀಗಾಗಿ ಭೂ ಮಾಪಕರು ಹಾಗೂ ಗ್ರಾಮ ಲೆಕ್ಕಿಗರು ತಹಸೀಲ್ದಾರ್ ನೇತೃತ್ವದಲ್ಲಿ ಸರ್ಕಾರಿ ದಾಖಲೆಗಳಲ್ಲಿರುವ ಪ್ರತಿ ಸರ್ಕಾರಿ ಜಮೀನನ್ನು ಮತ್ತೆ ರೀ ಸರ್ವೆ ನಡೆಸಬೇಕು. ಆ ವರದಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಒತ್ತುವರಿಯಾದ ಸರ್ಕಾರಿ ಜಮೀನು ಗುರುತಿಸಿ ಪಟ್ಟಿ ಸಿದ್ದಪಡಿಸಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − three =
Remember me
