ಬೆಂಗಳೂರು:ಬಿಬಿಎಂಪಿ ಅಧಿಕಾರಿಗಳು ಕೆಲವು ಪ್ರದೇಶಗಳಲ್ಲಿ ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ಹೀಗೆ ಬೀದಿ ಬದಿ ಅಂಗಡಿ ತೆರವು ವೇಳೆ ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜಯನಗರದಲ್ಲಿ ನಡೆದಿದೆ. ಈ ಘಟನೆ ಕಳೆದ ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕೃಷ್ಣ(49) ಮೃತ ವ್ಯಕ್ತಿ. ಜಯನಗರದಲ್ಲಿ ಕಳೆದ 25 ವರ್ಷಗಳಿಂದ ತಾಯಿ ರತ್ನಮ್ಮ ಜೊತೆ ಮೃತ ಕೃಷ್ಣ ವ್ಯಾಪಾರಕ್ಕೆ ಸಹಾಯ ಮಾಡುತ್ತಿದ್ದ. ಆದರೆ, ಅಧಿಕಾರಿಗಳು ಇವರ ವ್ಯಾಪಾರಕ್ಕೆ ಅವಕಾಶ ನೀಡದ ಹಿನ್ನಲೆ ಮನನೊಂದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಡೆದಿದ್ದೇನು?:ನವೆಂಬರ್​​​​​ 07 ರಂದು ಬಿಬಿಎಂಪಿ ಮಾರ್ಷಲ್‌ಗಳ ತಂಡ ಜೆಸಿಬಿ‌ ಮೂಲಕ ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಫುಟ್​​ಪಾತ್​​ನಲ್ಲಿದ್ದ ಅಕ್ರಮ ಶೆಡ್​, ಬಟ್ಟೆ ಅಂಡಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಿತ್ತು. ಆ ಮೂಲಕ ಪಾದಚಾರಿಗಳ ಮಾರ್ಗ ಸುಗಮಗೊಳಿಸಲಾಗಿತ್ತು. ಈ ಹಿನ್ನಲೆ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿಯಲ್ಲಿದ್ದು, ಅಂಗಡಿಗಳ ತೆರವು ಕಾರ್ಯಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ ಈ ಕುರಿತು ಮಾತನಾಡಿದ್ದ ಉಸ್ತುವಾರಿ ಅಧಿಕಾರಿ ಸೋಮಶೇಖರ್​, ‘ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆಗೆದುಹಾಕಲಾಗಿದೆ. ಈ ಎಲ್ಲಾ ಬೀದಿ ಬದಿ ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದಾರ ತೆರವು ಮಾಡಬೇಕು ಎಂದು 6 ತಿಂಗಳ ಹಿಂದೆ ಹೇಳಲಾಗಿತ್ತು. ಬಳಿಕ ಸುಮಾರು ಮೂರು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಿಲಾಗಿತ್ತು. ಅಷ್ಟೇ ಅಲ್ಲ, ನವೆಂಬರ್ 4 ರಂದು ನಾವು ಈ ಪ್ರದೇಶದಲ್ಲಿ ತೆರೆದ ಮೈಕ್ ಬಳಸಿ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವುದಾಗಿ ಹೇಳಿದ್ದೇವು. ಆ ಹಿನ್ನೆಲೆ ನಾವು ಫುಟ್‌ಪಾತ್‌ಗಳಲ್ಲಿನ ಅಕ್ರಮ ಅಂಗಡಿಗಳನ್ನು ನೆಲಸಮಗೊಳಿಸಿದ್ದೇವೆ ಎಂದು ಹೇಳಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
