ಚಿತ್ರದುರ್ಗ:ಕೋಟೆನಾಡು ಚಿತ್ರದುರ್ಗದಲ್ಲಿ ರಾತ್ರಿ ಹೊತ್ತು ಗುಂಡಿನ ಸದ್ದು ಕೇಳಿಬಂದಿದ್ದು ವ್ಯಾಪಾರಿಯೊಬ್ಬರನ್ನು ಬಲಿ ಪಡೆದಿದೆ. ವರ್ತಕರ ಸೋಗಿನಲ್ಲಿ ಬಂದಿದ್ದ ಸುಪಾರಿ ಕಿಲ್ಲರ್ಸ್​ ಅಂಗಡಿ ಮಾಲೀಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಹೊಳಲ್ಕೆರೆಯ ಪ್ರಿಯದರ್ಶಿನಿ ಬಟ್ಟೆ ಅಂಗಡಿ ಮಾಲೀಕ ಮೂಲಸಿಂಗ್ ಕೊಲೆಗೀಡಾದ ವ್ಯಕ್ತಿ. ದುಷ್ಕರ್ಮಿಗಳು ಬಟ್ಟೆ ಮಾರಾಟ ಮಾಡುವ ಸೋಗಿನಲ್ಲಿ ಆಗಮಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಂಗಡಿ ಮುಂದೆ ಪ್ರಯೋಗಿಸಲಾದ ಗುಂಡಿನೇಟಿಗೆ ಮೂಲಸಿಂಗ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹೊಳಲ್ಕೆರೆಯಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶೂಟೌಟ್ ಪ್ರಕರಣದಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಉಳಿದ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಆಟ ಆಡ್ತ ಆಡ್ತ ಸತ್ತು ಹೋದ ಬಾಲಕಿ: ಶಾಲೆ ತೆರೆದಿಲ್ಲ, ಮಕ್ಕಳು ಮನೇಲೇ ಇದ್ದಾರೆ ಅಂತಾದರೆ ಯಾವುದಕ್ಕೂ ಹುಷಾರಾಗಿರಿ..!

ಹೊಟ್ಟೆನೋವಿಗೆ ಪ್ರಾಣಬಲಿ; ಬೇನೆ ತಾಳಲಾಗದೆ ನೇಣಿಗೆ ಶರಣಾದ ವ್ಯಕ್ತಿ

ಕಳೆದು ಹೋದ ಮೊಬೈಲ್​ಫೋನ್​ಗಾಗಿ ಗುಂಪು ಕಟ್ಟಿಕೊಂಡು ಬಂದು ಹಲ್ಲೆ; ಫೋನ್​ ಕಳ್ಕೊಂಡವನೊಬ್ಬ, ಪ್ರಾಣ ಕಳ್ಕೊಂಡಿದ್ದು ಮತ್ತೊಬ್ಬ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
