ಬೆಂಗಳೂರು:ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ:ಬಲಿಷ್ಟ ರಾಷ್ಟ್ರ ನಿರ್ಮಾಣಕ್ಕೆ ವ್ಯಸನಮುಕ್ತ ಸಮಾಜ ಅನಿವಾರ್ಯ: ಎಸ್.ವಿ.ಸಂಕನೂರು
“ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ. ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದರು.
“ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷದ ಸರ್ಕಾರವೇ ರಚಿಸಿದ್ದ ನ್ಯಾ.ಎ.ಜೆ. ಸದಾಶಿವ ಅವರ ಅಧ್ಯಕ್ಷತೆಯ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರ್ಕಾರ ಬದ್ಧವಾಗಿದೆ. ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ, ಕೇಂದ್ರ ಸರ್ಕಾರ ಇಲ್ಲಿಯವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು” ಎಂದಿದ್ದಾರೆ.
ಇದನ್ನೂ ಓದಿ:ಗುರುಪುರ ಬಂಡಸಾಲೆಯಲ್ಲಿ ಮರ ತೆರವು: ಎರಡು ತಾಸುಗಳ ಕಾಲ ವಾಹನ ಸಂಚಾರ ಸ್ಥಗಿತ
“ಈಗಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ. ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ” ಎಂದು ಸಿಎಂ ತಿಳಿಸಿದರು.
ಟೀಮ್ ಇಂಡಿಯಾಗೆ ಸಿಕ್ಕರು ಹೊಸ ಸಚಿನ್​, ಸೆಹ್ವಾಗ್​ ಮತ್ತು ಯುವರಾಜ್​! ಯಾರು ಆ 3 ಸ್ಟಾರ್​ ಆಟಗಾರರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
