ಬೆಂಗಳೂರು:ಇಂದು(07-07-23) 14ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ, ಬಜೆಟ್​​ನಲ್ಲಿ ನಮ್ಮ ಮೆಟ್ರೋ ಇಲಾಖೆಗೆ 30,000 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಇದು​ ಐದು ಗ್ಯಾರಂಟಿ ಮತ್ತು ಪ್ರಣಾಳಿಕೆ ಅಂಶಗಳನ್ನು ಒಳಗೊಂಡ ಬಜೆಟ್​​​: ಸಿಎಂ ಸಿದ್ದರಾಮಯ್ಯ
ರಾಜ್ಯ ಬಜೆಟ್​​ನಲ್ಲಿ 3.27 ಲಕ್ಷ ಕೋಟಿ ರೂ.ಗೂ ಹೆಚ್ಚು ವೆಚ್ಚದ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದರು ಮತ್ತು ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ಕೊಡುವುದಾಗಿ ಹೇಳಿದರು. ಈ ಮಧ್ಯೆ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಪೂರೈಸಲು ವಾರ್ಷಿಕ ಅಂದಾಜು 52,000 ಕೋಟಿ ರೂ. ವೆಚ್ಚ ತಗಲುತ್ತದೆ ಎಂದು ಸಿಎಂ ಹೇಳಿದರು.
ಚುನಾವಣಾ ಪೂರ್ವ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದರ ಕುರಿತು ಬಜೆಟ್​​ನಲ್ಲಿ ಮಾತನಾಡಿದ ಸಿಎಂ, ಈ ಯೋಜನೆಗಳಿಂದ 1.3 ಕೋಟಿ ಕುಟುಂಬಗಳಿಗೆ ಪ್ರಯೋಜನ ದೊರೆಯುತ್ತದೆ ಎಂದು ಹೇಳಿದರು. ಬಜೆಟ್​​ನಲ್ಲಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇಕಡಾ 20% ರಷ್ಟು ಹೆಚ್ಚಿಸಿದ್ದು, ಸದ್ಯ ಮದ್ಯದ ದರ ಈಗ ಮತ್ತಷ್ಟು ದುಬಾರಿಯಾಗಲಿದೆ. ಆಹಾರ ಇಲಾಖೆಗೆ 10,460 ಕೋಟಿ ರೂ., ಇಂದಿರಾ ಆಹಾರ ಕ್ಯಾಂಟೀನ್‌ಗೆ 100 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 24,166 ಕೋಟಿ ರೂ. ಹಣವನ್ನು ಮುಖ್ಯಮಂತ್ರಿಗಳು ಇಂದಿನ ಬಜೆಟ್​​ನಲ್ಲಿ ಘೋಷಿಸಿದ್ದಾರೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nineteen =
Remember me
