ಬೆಂಗಳೂರು:ಆರ್ಥಿಕ ಹಿನ್ನಡೆಯಿಂದ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ 5000 ರೂ. ವಾರ್ಷಿಕ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮುಖಾಂತರ ಒದಗಿಸಲು 2022-23ನೇ ಸಾಲಿನಿಂದ “ನೇಕಾರ ಸಮ್ಯಾನ್ (ವಿದ್ಯುತ್ ಮಗ್ಗ)” ಹೊಸ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
2020-21ನೇ ಸಾಲಿನಲ್ಲಿ ಕೋವಿಡ್-19 ಸಂಕಷ್ಟದ ಪ್ರಯುಕ್ತ 51,862 ವಿದ್ಯುತ್ ಮಗ್ಗ ನೇಕಾರರಿಗೆ 2,000 ರೂಪಾಯಿಯಂತೆ ಒಟ್ಟು 1037.24 ಲಕ್ಷ ರೂಪಾಯಿ ಡಿಬಿಟಿ ಮೂಲಕ ಬಿಡುಗಡೆ ಮಾಡಲಾಗಿದೆ. 2021-22ನೇ ಸಾಲಿನಲ್ಲಿ ಕೋವಿಡ್-19 ಎರಡನೇ ಅಲೆಯ ಸಂಕಷ್ಟದ ಪ್ರಯುಕ್ತ 85,718 ವಿದ್ಯುತ್ ಮಗ್ಗ ನೇಕಾರರಿಗೆ 3,000 ರೂಪಾಯಿಯಂತೆ ಒಟ್ಟು 2571.54 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.
ಆ ಬಳಿಕ ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು, ಕಾರ್ಮಿಕರ ಮಾಹಿತಿ ಕ್ರೋಡೀಕರಿಸಲು ಇಲಾಖೆಯಿಂದ ಗಣತಿ, ಸಮೀಕ್ಷೆ ಕೈಗೊಳ್ಳಲಾಗಿದೆ. ಆ ಪ್ರಕಾರ ಇದುವರೆಗೆ ನೋಂದಾಯಿತ ಸುಮಾರು 1,02,980 ನೇಕಾರರು/ಕಾರ್ಮಿಕರಿಗೆ ತಲಾ 5000 ರೂಪಾಯಿಯಂತೆ ವಾರ್ಷಿಕ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮುಖಾಂತರ ವರ್ಗಾಯಿಸಲು ಈ ದಿನ ಚಾಲನೆ ನೀಡಲಾಗುತ್ತಿದೆ ಸರ್ಕಾರ ತಿಳಿಸಿದೆ.
‘ನಾನು ಯೂಟ್ಯೂಬರ್ ಆಗಿದ್ದು ಯಾಕೆ?’ ಅಂತ ಖುದ್ದು ಡಾ.ಬ್ರೋ ಅವರೇ ಹಂಚಿಕೊಂಡಿದ್ದಾರೆ ಇಲ್ಲಿ..

ಡಾ.ಬ್ರೋ ಯಾವಾಗ ವಿದೇಶಕ್ಕೆ ಹೋಗಲ್ಲ?; ಒಂದು ದೇಶಕ್ಕೆ ಹೊರಟಾಗ ಅವರ ಅಧ್ಯಯನ ಹೇಗಿರುತ್ತೆ?; ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 10 =
Remember me
