ಬೆಂಗಳೂರು:ಇಂದು ಸಚಿವ ಸಂಪುಟ ಸಭೆಯ ನಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್​ನ ಐದು ಗ್ಯಾರಂಟಿಗಳಲ್ಲಿ ಎಲ್ಲವನ್ನೂ ಈ ವರ್ಷವೇ ಜಾರಿ ಮಾಡುವುದಾಗಿ ಹೇಳಿದ್ದಾರೆ.
ಇಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ “ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಚುನಾವಣೆ ಸಂದರ್ಭದಲ್ಲಿ ಪಕ್ಷದ ವತಿಯಿಂದ ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಗ್ಯಾರಂಟಿ ಕಾರ್ಡ್​ಗಳಿಗೆ ನಾನು ಮತ್ತು ಡಿಕೆ ಶಿವಕುಮಾರ್ ಸಹಿ ಮಾಡಿದ್ದೆವು. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಭರವಸೆ ನೀಡಿದ್ದೆವು. ಕಾರ್ಡ್​ಗಳನ್ನು ಕಾರ್ಯಕರ್ತರ ಮೂಲಕ ಹಂಚಿಕೆ ಮಾಡಿದ್ದೆವು. ಆದರೆ ವಿರೋಧ ಪಕ್ಷದವರು ನಾವು ಯೋಜನೆಗಳನ್ನು ಜಾರಿ ಮಾಡುವುದಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಕುರಿತು ಕೆಲವು ಮಾಧ್ಯಮಗಳು ಕೂಡ ತಮ್ಮ ಅನಸಿಕೆ ಬರೆದಿವೆ.
ಮೊದಲ ಕ್ಯಾಬಿನೆಟ್​ನಲ್ಲಿ ಗ್ಯಾರಂಟಿ ಕುರಿತು ‌ನಾವು ತೀರ್ಮಾನ ಮಾಡಿದ್ವಿ. ಐದು ಗ್ಯಾರಂಟಿ ಜಾರಿ ಬಗ್ಗೆ ತಾತ್ವಿಕ ಆದೇಶ ಹೊರಡಿಸಿದ್ವಿ. ಈಗ 2ನೇ ಸಚಿವ ಸಂಪುಟದಲ್ಲಿ ವಿಶೇಷವಾಗಿ ಗ್ಯಾರಂಟಿ ಜಾರಿಗೆ ಕುರಿತು ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ. ಐದು ಗ್ಯಾರಂಟಿ ಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ತರ್ತೇವೆ” ಎಂದರು
ಗ್ಯಾರಂಟಿ ಘೋಷಣೆಗೂ ಮುನ್ನ, ಸಚಿವ ಸಂಪುಟ ಸಭೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚಿಸಿದರು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಇಂಧನ ಸಚಿವ ಕೆಜೆ ಜಾರ್ಜ್​, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಪ್ರಮುಖ ಸಚಿವರುಗಳು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + six =
Remember me
