ಬೆಂಗಳೂರು:ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮುದಾಯದ ಏಳ್ಗೆಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಭರವಸೆ ನೀಡಿದ್ದು, ಇದಕ್ಕಾಗಿ ಆರಂಭದಲ್ಲಿ 250 ಕೋಟಿ ರೂ. ನೀಡುವುದಾಗಿ ವಾಗ್ದಾನ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಬಿ. ಜಿ. ಪಾಟೀಲ್, ಅಖಿಲ ಭಾರತ ವೀರಶೈವ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ, ಮಾಜಿ ಮೇಯರ್ ಶರಣಕುಮಾರ ಮೋದಿ ನೇತೃತ್ವದಲ್ಲಿ ಬುಧವಾರ ಸಿಎಂ ಭೇಟಿ ಮಾಡಿದ ನಿಯೋಗ ನಿಗಮ ಸ್ಥಾಪಿಸಬೇಕು ಮತ್ತು ಆರಂಭದಲ್ಲಿ 500 ಕೋಟಿ ರೂ. ಒದಗಿಸಬೇಕೆಂದು ಮನವಿ ಸಲ್ಲಿಸಿತು.
ಇದನ್ನೂ ಓದಿ;ನಟ ಸುಶಾಂತ್​ ಸಿಂಗ್​ ರಜಪೂತ್​ ತಿಂಗಳಿಗೆಷ್ಟು ಖರ್ಚು ಮಾಡುತ್ತಿದ್ದರು?
ವೀರಶೈವ ಲಿಂಗಾಯತ ಸಮುದಾಯದಲ್ಲಿರುವ 86 ಉಪ ಜಾತಿಗಳಲ್ಲಿ ಲಕ್ಷಾಂತರ ಜನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಅವರ ಉನ್ನತಿಗಾಗಿ ಸರ್ಕಾರ ನಿಗಮ ಸ್ಥಾಪಿಸಿ, ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ಬಿ.ಜಿ. ಪಾಟೀಲ್ ವಿವರಿಸಿ ದರು. ಈ ವಿಷಯವನ್ನು ಕ್ಯಾಬಿನೆಟ್​ನಲ್ಲಿಟ್ಟು ಒಪ್ಪಿಗೆ ಪಡೆಯಲಾಗುತ್ತದೆ ಎಂದು ನಿಯೋಗಕ್ಕೆ ಸಿಎಂ ಭರವಸೆ ನೀಡಿದರು.
ಈಗಾಗಲೇ ಎಲ್ಲ ಪಕ್ಷಗಳ ಶಾಸಕರು ನಿಗಮ ಸ್ಥಾಪನೆಗೆ ಮನವಿ ಮಾಡಿದ್ದನ್ನು ಮತ್ತೊಮ್ಮೆನನೆಪಿಸಕೊಡಲಾಯಿತಲ್ಲದೇ ಮಹಾರಾಷ್ಟ್ರ ಮಾದರಿಯಲ್ಲಿ ನಿಗಮ ಆಗಬೇಕೆಂದು ಕೋರಿ, ನಿಗಮ ಸ್ಥಾಪನೆಗೆ ಆ ರಾಜ್ಯ ಅನುಸರಿಸಿದ ನಿಯಮಾವಳಿಗಳ ಪಟ್ಟಿ ನೀಡಲಾಯಿತು. ನಿಯೋಗದಲ್ಲಿ ಶಾಸಕ ಎಂ. ವೈ. ಪಾಟೀಲ್, ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ್, ಪ್ರಮುಖರಾದ ರವಿ ಬಿರಾದಾರ, ಹಣಮಂತರಾವ್ ಮಲಾಜಿ ಇತರರಿದ್ದರು.
ಲಸಿಕೆ ಇಲ್ಲದೆಯೂ ಕೊನೆಗಾಣಲಿದೆ ಕರೊನಾ ಸಂಕಷ್ಟ; ಇಟಲಿ ವೈದ್ಯರಿಂದ ಅಧ್ಯಯನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + two =
Remember me
