ಬೆಂಗಳೂರು: ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಶುಕ್ರವಾರದಿಂದ ಕಚೇರಿ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ನಾಳೆ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲೂ ಭಾಗಿಯಾಗುತ್ತಾರೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ.
ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಾಳೆ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣೆಕ್​ಷಾ ಪರೇಡ್​ ಮೈದಾನದಲ್ಲಿ ನಡೆಯಲಿದೆ. ಇದರಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಅವರು ಬೆಳಗ್ಗೆ 8.45ಕ್ಕೆ ಮನೆಯಿಂದ ಹೊರಡಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಇದನ್ನೂ ಓದಿ:ಸಿಆರ್​ಪಿಎಫ್​ ಅಧಿಕಾರಿಗೆ ಸಿಗ್ತಾ ಇರುವ ಏಳನೇ ಗ್ಯಾಲಂಟರಿ ಮೆಡಲ್ ಇದು…
ಇನ್ನುಳಿದಂತೆ ಮುಖ್ಯಮಂತ್ರಿಯವರ ದಿನದ ಕಾರ್ಯಕ್ರಮ ಪಟ್ಟಿಯಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಲ್ಲ.
ಪ್ರಧಾನಿ ಪ್ರಯಾಣಕ್ಕೆ ಏರ್​ ಇಂಡಿಯಾ ಒನ್​: ಭಾರತಕ್ಕೆ ಶೀಘ್ರ 8500 ಕೋಟಿ ರೂ. ಮೌಲ್ಯದ 2 ವಿಮಾನಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − two =
Remember me
