ಬೆಳಗಾವಿ:ಬೆಳಗಾವಿ ವಿಧಾನ ಮಂಡಲ ಅಧಿವೇಶನ ಫಲಪ್ರದ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು. ಯಾವುದೇ ವಿಚಾರವನ್ನೂ ಕೂಡ ಚರ್ಚೆ ಮಾಡಲು ನಾವು ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದೆಹಲಿಗೆ ತೆರಳುವುದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಈ ಸಭೆಯಲ್ಲಿ ಜೆ.ಪಿ.ನಡ್ಡಾ, ಅಮೀತ ಶಾ ಅವರು ಭಾಗವಹಿಸುತ್ತಿದ್ದಾರೆ. ಚುನಾವಣಾ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗುತ್ತದೆ. ಸಾಧ್ಯವಾದರೆ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸುವೆ ಎಂದರು.
ಸಂಪುಟ ಸಭೆಯಲ್ಲಿ ಕೋವಿಡ್ ಬಗ್ಗೆ ಚರ್ಚೆ ಆಗಿದೆ. ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಕಡ್ಡಾಯ ಬಗ್ಗೆ ಚರ್ಚಿಸಲಾಗಿದೆ. ಜನಜೀವನಕ್ಕೆ ಯಾವುದೇ ತೊಂದರೆ ಆಗದೇ ಇರುವ ರೀತಿ ಹೊಸ ವರ್ಷಾಚರಣೆಗೆ ಕೆಲವು ನಿಯಮಗಳನ್ನು ಸೇರಿಸಲಾಗುವುದು. ಆರ್ಥಿಕತೆ ಮೇಲೆ ಪರಿಣಾಮ ಬೀರದ ರೀತಿಯಲ್ಲಿ ಕ್ರಮ‌ ಕೈಗೊಳ್ಳುತ್ತೇವೆ ಎಂದರು.
ಖಾಸಗಿಯವರ ಗುತ್ತಿಗೆ ಅವಧಿ ಮುಕ್ತಾಯ, ಕುಣಿಗಲ್​ ಸ್ಟಡ್​ ಫಾರ್ಮ್ ಹೊಣೆ ಕೇಂದ್ರ ಸರ್ಕಾರವೇ ವಹಿಸಿಕೊಳ್ಳಲಿ: ಎಸ್​ಪಿಎಂ ಮನವಿ

ಪಂಚರತ್ನ ರಥಯಾತ್ರೆ ವೇಳೆ ಕೆ.ಆರ್.ಪೇಟೆಯಲ್ಲಿ ಸ್ಟೀಲ್​ ಬಿಂದಿಗೆಗಾಗಿ ಮುಗಿಬಿದ್ದ ನಾರಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
