ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಯ ವಿಜಯನಗರದ ಆಂಜನೇಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ. ಆಂಜನೇಯ ದೇವರ ಮುಂದೆ ಕುಳಿತು ಭಕ್ತಿಯಿಂದ ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಬೊಮ್ಮಾಯಿಗೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ ಸೇರಿದಂತೆ ಸ್ಥಳೀಯ ನಿವಾಸಿಗಳು ಸಾಥ್ ನೀಡಿದ್ದಾರೆ.
#WATCH| Karnataka CM Basavaraj Bommai along with his supporters recites Hanuman Chalisa at Hanuman Mandir in Hubbali's Vijay Nagar.
(Source: CMO)pic.twitter.com/ihiJhcD8bL
— ANI (@ANI)May 9, 2023

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಎಂದು ಹೇಳಿತ್ತು. ಇದು ಬಿಜೆಪಿ ನಾಯಕರ ಹಾಗೂ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣಕ್ಕೆ ಕರೆ ನೀಡಲಾಗಿತ್ತು. ಅದರಂತೆ ಕಳೆದ ಗುರುವಾರ(ಮೇ 04)ದಿಂದ ರಾಜ್ಯದ ವಿವಿಧ ದೇವಾಲಯಗಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಲಾಗಿದೆ.
ಕಾಂಗ್ರೆಸ್​ನಿಂದ ಬಜರಂಗದಳ ನಿಷೇಧ ವಿಚಾರ ಹೆಚ್ಚು ಕಾವು ಪಡೆದುಕೊಂಡಿರುವ ಈ ಸಮಯದಲ್ಲಿ ಬೀದರ್​ ಜಿಲ್ಲೆಯ ಐತಿಹಾಸಿಕ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರಿನ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್​ನಲ್ಲಿರುವ ಶ್ರೀಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ, ಉಪಮೇಯರ್ ಎಸ್.ಹರೀಶ್, ಬಿಜೆಪಿ ಮಹಿಳಾ ಕಾರ್ಯಕರ್ತರು ಶೋಭಾಗೆ ಸಾಥ್ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − four =
Remember me
