ಮಂಡ್ಯ:ಪಾಕಿಸ್ತಾನ, ಚೀನಾ ದೇಶದ ನಾಗರೀಕರು ನಮ್ಮ ದೇಶಕ್ಕೂ ಪ್ರಧಾನಿ ಮೋದಿಯಂತಹ ನಾಯಕ ಬೇಕು ಎಂದು ಹೇಳುತ್ತಿದ್ದಾರೆ. ಚೀನಾದವರು ಮೋದಿ ವಿಶ್ವ ನಾಯಕ ಎಂದು ಹೇಳುತ್ತಾರೆ. ಅಮೇರಿಕಾದ ಜನರಿಂದಲೂ ನಮ್ಮ ದೇಶದ ಪ್ರಧಾನಿಗೆ ಜನಮನ್ನಣೆ ಲಭಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನರೇಂದ್ರ ಮೋದಿ ನಾಯಕತ್ವವನ್ನು ಕೊಂಡಾಡಿದರು.
ನೂತನವಾಗಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಮಾರು 118 ಕಿ.ಮೀ ಉದ್ದದ ಮೈ-ಬೆಂ ದಶಪಥ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಮಾತನಾಡುತ್ತಾ, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ನಂತರದಲ್ಲಿ ದೇಶ ಅಭಿವೃದ್ಧಿ ಕಾಣುತ್ತಿದೆ. ಅಭಿವೃದ್ಧಿಯ ವಿಚಾರದಲ್ಲಿ ವಿರೋಧ ಪಕ್ಷಗಳು ಎಷ್ಟೇ ಸುಳ್ಳುಗಳನ್ನು ಹೇಳಿದರೂ ಜನರು ಮಾತ್ರ ನಂಬಲು ತಯಾರಿಲ್ಲ. ಹಲವು ಅಭಿವೃದ್ಧಿ ಪರ ಯೋಜನೆಗಳಿಗೆ ಮೋದಿ ಸರಕಾರ ಅಡಿಗಲ್ಲು ಹಾಕಿದೆ. ಬಿಜೆಪಿಯಿಂದ ಮಾತ್ರ ಭಾರತದ ಅಭಿವೃದ್ಧಿ ಸಾಧ್ಯ ಎಂದರು.
ಇದನ್ನೂ ಓದಿ:ದಶಪಥ ಹೆದ್ದಾರಿ ಉದ್ಘಾಟನೆಗೆ ವಿರೋಧ; ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ
ಡಬಲ್ ಇಂಜಿನ್ ಸರಕಾರ ರಾಜ್ಯದ ಅಭಿವೃದ್ಧಿಗಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆ ಪುನಾರಂಭ ಕಂಡಿದೆ. ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಅನುಕೂಲವಾಗಿದ್ದು, ಮಂಡ್ಯದ 2 ಲಕ್ಷಕ್ಕೂ ಹೆಚ್ಚು ಜನ ಯೋಜನೆ ಲಾಭ ಪಡೆದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + six =
Remember me
