ಮಂಗಳೂರು:ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿದ್ದು, ಭಿನ್ನಮತ ಶಮನವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರ ಉಳಿದಿದೆ. ಕೆಲವೆಡೆ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ. ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ ಬದಲಿಸೋದು ಸಾಮಾನ್ಯ, ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ. ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದರು.
ಇದನ್ನೂ ಓದಿ:ಕ್ರಿಕೆಟ್​​ ಟೀಮ್​​ನಲ್ಲಿ ತಮಿಳರಿಲ್ಲ..ಸಿಎಸ್‌ಕೆ ಬ್ಯಾನ್​ ಮಾಡಿ ಎಂದ ಶಾಸಕ!
ಆರೋಪಗಳಲ್ಲಿ ಹುರುಳಿಲ್ಲ:ಹಿರಿಯರ ಜತೆ ನಾನು ಹಾಗೂ ಹೈಕಮಾಂಡ್ ಮಾತಾಡುತ್ತಿದ್ದೇವೆ ಲಕ್ಷ್ಮಣ ಸವದಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದ ಅವರು ನೆಹರೂ ಓಲೇಕಾರ್ ಆರೋಪಗಳಲ್ಲಿ ಹುರುಳಿಲ್ಲ ಎಂದರು.
ಇದನ್ನೂ ಓದಿ:ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್
ಆರೋಪ ಸಾಬೀತು ಮಾಡಲಿ:ಅಸಮಾಧಾನಿತರ ಜೊತೆ ಹೈಕಮಾಂಡ್ ಮಾತನಾಡುತ್ತಿದೆ.. ನಾನು ಎಲ್ಲಾ ನಾಯಕರ ಜೊತೆ ಮಾತನಾಡಿದ್ದೇನೆ. ಭಿನ್ನಮತ ಶೀಘ್ರವೇ ಬಗೆಹರಿಯುವ ವಿಶ್ವಾಸ ಇದೆ. ಸವದಿ ಹಿರಿಯರು, ಸುಧೀರ್ಘ ರಾಜಕೀಯದಲ್ಲಿದ್ದಾರೆ. ಸವದಿಗೆ ಜನರಿಂದಲೂ ಒತ್ತಡ ಇದೆ, ಸಮಯ ಬೇಕು. ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ ಹೇಳಿಕೆ ಬೇಡ, ದಾಖಲೆ ನೀಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ಕಾಂಗ್ರೆಸ್ ನವರಿಗೆ 60ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಈಗ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ʻಪಿಎಂ ಆವಾಸ್ ಯೋಜನೆ ʼನನ್ನ ಜೀವನವನ್ನೇ ಬದಲಾಯಿಸ್ತು : ಮೋದಿಗೆ ಪತ್ರ ಬರೆದ ಮಹಿಳೆ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eleven + twelve =
Remember me
