ಬೆಂಗಳೂರು:ಕನ್ನಡ ಚಿತ್ರ ರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಹುಟ್ಟೂರು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲ್ ನಲ್ಲಿ ಶಿಥಿಲಾವಸ್ಥೆಯಲ್ಲಿ ಇರುವ ಅವರ ಮನೆಯನ್ನು ಸ್ಮಾರಕವಾಗಿ ರೂಪಿಸಲು ಹಾಗೂ ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಸ್ವಾಮ್ಯದ ಕನ್ನಡ ಚಲನಚಿತ್ರ ಅಮೃತೋತ್ಸವ ಭವನದಲ್ಲಿ ಚಿತ್ರ ಮಂದಿರವನ್ನು ನಿರ್ಮಿಸಲು ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.
13ನೇ ಬೆಂಗಳೂರು ಅಂತರ್​ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಇಂತಹ ಚಲನ ಚಿತ್ರೋತ್ಸವಗಳನ್ನು ಆಯೋಜಿಸಲು ಹಲವು ತಿಂಗಳುಗಳೇ ಬೇಕಾಗುತ್ತಿದ್ದವು. ಆದರೆ, ತಂತ್ರಜ್ಞಾನ ಬೆಳೆದಿರುವ ಸಂದರ್ಭದಲ್ಲಿ ಅತ್ಯಲ್ಪ ಅವಧಿಯಲ್ಲಿ ಚಲನಚಿತ್ರೋತ್ಸವಗಳನ್ನು ಆಯೋಜಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಕನ್ನಡದ ಮೊಟ್ಟ ಮೊದಲ ವಾಕ್ ಚಿತ್ರ ಸತಿ ಸುಲೋಚನ 1934 ರ ಮಾರ್ಚ್ 3 ರಂದು ತೆರೆಕಂಡ ಸಂಸ್ಮರಣೆಯಲ್ಲಿ ಮಾರ್ಚ್ 3 ರನ್ನು ವಿಶ್ವ ಕನ್ನಡ ಚಲನಚಿತ್ರ ದಿನ ಎಂದು ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇನ್ನು ಮುಂದೆ ಪ್ರತಿ ವರ್ಷ ಇದೇ ದಿನದಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಪ್ರಾರಂಭಿಸಲಾಗುವುದು ಎಂದರು.
ಸಮಾವೇಶವಾಗಿ ಮಾರ್ಪಟ್ಟ ಕಾಂಗ್ರೆಸ್ ಪಾದಯಾತ್ರೆ; ಈ ಹೋರಾಟದಿಂದ ಇತಿಹಾಸ ಸೃಷ್ಟಿ ಎಂದ ಸುರ್ಜೆವಾಲಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
