ಉಡುಪಿ:ಹಿಂದು ಎಂಬ ಪದದ ಅರ್ಥ ಅಶ್ಲೀಲ ಎಂದಿದೆ ಎಂದ ಶಾಸಕ ಸತೀಶ್​ ಜಾರಕಿಹೊಳಿ ವಿರುದ್ಧ ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸತೀಶ್​ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಮೂಲಕ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಸತೀಶ್​ ಜಾರಕಿಹೊಳಿ ಅವರು ದೇಶದ್ರೋಹದ ಕೆಲಸ, ದೇಶದ ಜನರ ಭಾವನೆಗಳಿಗೆ ಧಕ್ಕೆ ಆಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದು, ಅರೆಬೆರೆಯ ಮತ್ತು ಆಳವಾದ ಅಧ್ಯಯನ ಇಲ್ಲದೆ ಕೇವಲ ಓಟಿಗಾಗಿ ರಾಜಕಾರಣ ಮಾಡುತ್ತಿದ್ದಾರೆ. ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದೆಂಬ ಭ್ರಮೆಯಲ್ಲಿದ್ದಾರೆ. ಭಾರತದ ನಂಬಿಕೆಗಳ ಬುನಾದಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಯಾವುದಾದರೂ ದೇಶದಲ್ಲಿ ಆಂತರಿಕ ಕ್ಷೋಭೆಯನ್ನುಂಟು ಮಾಡುವುದು ದೇಶದ್ರೋಹದ ಕೆಲಸ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕು. ಕಾಂಗ್ರೆಸ್ ಇದಕ್ಕೆ ಸಹಮತ ವ್ಯಕ್ತಪಡಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.
ಸಣ್ಣ ಸಣ್ಣ ವಿಚಾರಗಳಿಗೆ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಗುತ್ತಾರೆ. ಈಗ ಏಕೆ ಮೌನ ವಹಿಸಿದ್ದಾರೆ? ಅವರ ಮೌನ ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಮ್ಮತಿ ಸೂಚಿಸುತ್ತದೆ. ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆಯಾದರೂ ಕಾಂಗ್ರೆಸ್ ಮಾತನಾಡುವುದಿಲ್ಲ ಎಂದರೆ ಏನರ್ಥ? ಎಂದು ಸಿಎಂ ಪ್ರಶ್ನಿಸಿದರು.
ಇಷ್ಟೆಲ್ಲಾ ಆದರೂ ಸತೀಶ್ ಜಾರಕಿಹೊಳಿ ತನ್ನ ಮಾತನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ. ಕೂಡಲೇ ಕಾಂಗ್ರೆಸ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನೆಪ ಮಾತ್ರಕ್ಕಿರುವ ಅಸ್ತಿತ್ವವನ್ನೂ ಈ ದೇಶದಲ್ಲಿ ಕಾಂಗ್ರೆಸ್ ಕಳೆದುಕೊಳ್ಳಲಿದೆ ಎಂದು ಎಚ್ಚರಿಸಿದ ಸಿಎಂ, ಸತೀಶ್​​ರ ಹೇಳಿಕೆ ಪೂರ್ವಾಗ್ರಹ ಪೀಡಿತವಾಗಿದ್ದಲ್ಲ, ಇದೊಂದು ಯೋಜನಾಬದ್ಧ ಹೇಳಿಕೆ ಎಂದು ಆರೋಪಿಸಿದರು.
ಸತೀಶ್​ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿ ಪಡೆ: ‘ನಾನು ಸ್ವಾಭಿಮಾನಿ ಹಿಂದು’ ಅಭಿಯಾನ ಶುರು

‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + six =
Remember me
