ಬೆಂಗಳೂರು:ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾರಿಡಾರ್ ಸುತ್ತಮುತ್ತ ಚಿರತೆಗಳಿದ್ದು, ಇವುಗಳ ದಾಳಿ ತಡೆಯಲು ವಿಶೇಷ ತಂಡ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಚಿರತೆ ದಾಳಿ ತಡೆಯಲು ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.
ಮೊದಲು ಕಾಡುಪಕ್ಕದಲ್ಲಿ‌ ಚಿರತೆ ದಾಳಿಯಾಗುತ್ತಿತ್ತು ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬ ದವರಿಗೆ 15 ಲಕ್ಷ ರೂ.ಗಳ ಪರಿಹಾರ ವನ್ನು ನೀಡಲಾಗುವುದು ಎಂದು ಬೊಮ್ಮಾಯಿ ಪ್ರಕಟಿಸಿದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
