ಹಾವೇರಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿಯಲ್ಲಿಂದು (ಏಪ್ರಿಲ್​ 15) ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾಂವಿ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಈ ಹಿಂದೆಯೂ ಜನರಿಂದ ಅಭೂತಪೂರ್ಣ ಬೆಂಬಲ ಸಿಕ್ಕಿದೆ. ಈ ಬಾರಿಯು ಶಿಗ್ಗಾಂವಿಯಿಂದ ಮತ್ತೊಮ್ಮೆ ಆಯ್ಕೆ ಬಯಿಸಿ ನಾಮಪತ್ರ ಸಲ್ಲಿಸಿದ್ದೇನೆ. ಈ ಬಾರಿ ಎಲ್ಲ ದಾಖಲೆಗಳನ್ನು ಮುರಿದು ಅತ್ಯಧಿಕ ಮತಗಳ ಅಂತರದಿಂದ ಗೆಲುವು ತಂದುಕೊಡಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
ಇದನ್ನೂ ಓದಿ:ಅರಸಿಕೆರೆಯಿಂದ ಬಿಎಸ್​ವೈ ಸಂಬಂಧಿ ಸಂತೋಷ್​, ವರುಣಾದಿಂದ ಭಾರತಿ ಶಂಕರ್​ಗೆ ಜೆಡಿಎಸ್ ಟಿಕೆಟ್ ಘೋಷಣೆ
ಈಗ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮತ್ತೊಮ್ಮೆ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರವನ್ನು ಸಲ್ಲಿಸುತ್ತೇನೆ ಎಂದರು. ಬಿಜೆಪಿಯಲ್ಲಿ ಎದ್ದಿರುವ ಬಂಡಾಯದ ವಿಚಾರವಾಗಿ ಪ್ರತಿಕ್ರಿಯಿಸಿ, ಆಡಳಿತ ಪಕ್ಷವು ಹಲವು ಹಾಲಿ ಶಾಸಕರನ್ನು ತೆಗೆದಾಗ ಬಂಡಾಯ ಏಳುವುದು ಸಹಜ. ಕೊನೆಯ ಪಟ್ಟಿ ಬಿಡುಗಡೆಯಾಗಲಿದೆ. ಆ ಬಳಿಕ ಎಲ್ಲವೂ ಶಮನ ಆಗುತ್ತದೆ ಎಂದು ಹೇಳಿದರು.
ಎದುರಾಳಿ ಯಾರೇ ಬರಲಿ ಚುನಾವಣೆ ಅಂದರೆ ಕುಸ್ತಿ ಎಂದ ಸಿಎಂ ಬೊಮ್ಮಾಯಿ, ನೆಹರು ಓಲೇಕಾರ ಆರೋಪಕ್ಕೆ ಪ್ರತಿಕ್ರಿಯಿಸಿ, ನನ್ನ ವಿರುದ್ಧದ ಆರೋಪ ಮಾಡಿದ್ದನ್ನು ಸಾಬೀತು ಮಾಡಲಿ ಎಂದು ತಿರುಗೇಟು ನೀಡಿದರು.(ದಿಗ್ವಿಜಯ ನ್ಯೂಸ್​)
500 ದಿನ ಒಬ್ಬರೇ ಗುಹೆ ಒಳಗೆ ಇದ್ದ ಪರ್ವತಾರೋಹಿ! ಹೊರಗೆ ಬರುತ್ತಲೇ ಹೇಳಿದ್ದೇನು?

ಸಿ-ವಿಜಿಲ್​ ಆ್ಯಪ್​ನಲ್ಲಿ ದೂರುಗಳ ಸುರಿಮಳೆ! 2,389 ದೂರು ದಾಖಲು, 1,979 ಕೇಸ್​ಗಳಿಗೆ ಕ್ರಮ

ಭಾಷಣ ಮಾಡುತ್ತಿದ್ದ ಸಮೀಪದಲ್ಲೇ ಬಾಂಬ್​ ಸ್ಫೋಟ: ಜಪಾನ್​ ಪ್ರಧಾನಿ ಸ್ಥಳಾಂತರ, ಓರ್ವನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
