ಉಡುಪಿ/ಮಂಗಳೂರು:ವಿಶ್ವ ಅಂಗಾಂಗ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅವರ ಮರಣಾನಂತರ ಅಂಗಾಂಗ ದಾನ ಮಾಡುವುದಾಗಿ ಘೊಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಅಂಗಾಂಗ ದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು. ಇತ್ತೀಚೆಗೆ ಅಂಗಾಂಗ ಕಸಿ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಗೊಂಡು, ಯಶಸ್ವಿಯೂ ಆಗುತ್ತಿದೆ. ಇದರಿಂದ ಸಾವಿರಾರು ಮಂದಿ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತೇನೆ. ಮರಣಾನಂತರ ಕಿಡ್ನಿ, ಹಾರ್ಟ್, ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರುತ್ತದೆ. ಹೀಗಾಗಿ ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು ಎಂದರು.
ಕರೊನಾ ನಿಯಂತ್ರಣಕ್ಕೆ ಕ್ರಮ:ಬೆಂಗಳೂರಿನಲ್ಲಿ ತಜ್ಞರ ಸಲಹೆ ಪಡೆದು ಕರೊನಾ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಕ್ಷಣ ತಜ್ಞರೊಂದಿಗೆ ಸಭೆ ನಡೆಸಲಾಗುವುದು. ತಜ್ಞರ ವರದಿ ಆಧಾರದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.
ಮಂಗಳೂರಲ್ಲಿ ಎನ್​ಐಎ ಕಚೇರಿ:ಭಯೋತ್ಪಾದಕ ಚಟುವಟಿಕೆ ಹೆಜ್ಜೆ ಗುರುತುಗಳು ಕರ್ನಾಟಕ ಕರಾವಳಿಯಲ್ಲಿ ಹಲವು ಬಾರಿ ಗೋಚರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಕಚೇರಿ ಆರಂಭಿಸುವ ಸಾಧ್ಯತೆ ಕುರಿತು ಸಿಎಂ ಸುಳಿವು ನೀಡಿದರು. ಈ ವಿಚಾರವಾಗಿ ಮುಂಬರುವ ದಿನಗಳಲ್ಲಿ ಗೃಹ ಸಚಿವರು ಮಂಗಳೂರಿಗೆ ಭೇಟಿ ನೀಡಿ ಪರಿಶೀಲಿಸುತ್ತಾರೆ. ಬಳಿಕ ನಾವೆಲ್ಲರೂ ಒಟ್ಟಾಗಿ ರ್ಚಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಕೆಲವು ವಿಚಾರಗಳನ್ನು ಬಹಿರಂಗಪಡಿಸಲು ಆಗಲ್ಲ ಎಂದರು.
ಕಾರ್ಯಕ್ರಮ ರದ್ದು:ಬೊಮ್ಮಾಯಿ ಶುಕ್ರವಾರ ತಲಪಾಡಿ ಗಡಿ ಪ್ರದೇಶಕ್ಕೆ ಭೇಟಿ ನೀಡುವ ಮಾಹಿತಿ ತಿಳಿದು ಕೇರಳ ಭಾಗದಲ್ಲಿ ಕರೊನಾ ಹಿನ್ನೆಲೆಯಲ್ಲಿ ಗಡಿ ಪ್ರವೇಶ ನಿರಾಕರಣೆ ಸಂಬಂಧ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು. ಪ್ರತಿಭಟನೆ ಮಾಹಿತಿ ತಿಳಿದ ಸಿಎಂ, ತಲಪಾಡಿ ಭೇಟಿ ರದ್ದುಗೊಳಿಸಿದರು.
ಸಿಎಂ ಕುಂಚದಲ್ಲಿ ನರ್ತಿಸಿದ ನವಿಲು:ಮಂಗಳೂರಿನ ಆರ್ಕಿಡ್ ಆರ್ಟ್ ಗ್ಯಾಲರಿವತಿಯಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಹಯೋಗದಲ್ಲಿ ಆ.13ರಿಂದ 15ರ ವರೆಗೆ ಆಯೋಜಿಸಲಾಗಿರುವ ಚಿತ್ರಕಲಾ ಶಿಬಿರ ಮತ್ತು ಪ್ರದರ್ಶನವನ್ನು ನವಿಲಿನ ಚಿತ್ರ ಬಿಡಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು.
ಪ್ಲಾಸ್ಟಿಕ್​ ಕಪ್​, ಪ್ಲೇಟ್​, ಸ್ಟ್ರಾಗಳ ಉತ್ಪಾದನೆಯೇ ಬಂದ್​; ಸರ್ಕಾರದಿಂದ ಘೋಷಣೆ

ನರ್ಸ್​-ಡ್ರೈವರ್​ ಲವ್​ ಟ್ರ್ಯಾಜೆಡಿ; ಕಾರೊಳಗೇ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
