ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾತ್ರಿಯೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಮೂಲಗಳ ಪ್ರಕಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ನಡೆಯಲಿರುವ ಶುಭ ಕಾರ್ಯದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದು, ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ಕೆಲವು ಹಿರಿಯ ನಾಯಕರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸುವ ಸಾಧ್ಯತೆಗಳಿವೆ.
ಅಲ್ಲದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ವಿಶೇಷ ಅನುದಾನ, ರೈಲ್ವೆ ಸವಲತ್ತುಗಳ ಸುಧಾರಣೆಗೆ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯಕ್ಕೆ ಆಗಮಿಸಿ, ಮೂರು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಕಾರಣ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿಎಸ್​ವೈ ಭಾನುವಾರ ರಾತ್ರಿಯೇ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಪತ್ನಿಯನ್ನು ನಟಿ ಕಿಯಾರಾ ಅಡ್ವಾಣಿಗೆ ಹೋಲಿಸಿದ ಗಂಡ: ಸಿಟ್ಟಿಗೆದ್ದ ಹೆಂಡತಿ ಹೀಗ್​ ಮಾಡೋದಾ!?

ಹಿಂದುಗಳಿಲ್ಲದ ಊರಲ್ಲಿ ಆಂಜನೇಯ ದೇವಸ್ಥಾನ ನಿರ್ಮಾಣ! ಹಿಂದು-ಮುಸ್ಲಿಂ ಭಾವೈಕ್ಯತೆ ಸಾರಿದ ಹನುಮನಹಳ್ಳಿ

ಖದೀಮನಿಗೆ ಸಾಥ್​ ನೀಡಿದ ಆರೋಪ: ಗಿರವಿ ಅಂಗಡಿ ಮಾಲೀಕನ ಬಂಧನ ವೇಳೆ ಹೈಡ್ರಾಮ, ಹೊತ್ತೊಯ್ದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 18 =
Remember me
